ಮೈಸೂರು: ಮಾಜಿ ಸಚಿವರ ಮನೆಯಲ್ಲಿ ಐಷಾರಾಮಿ ಕಾರು ಕಳ್ಳತನ; ಗಣೇಶ ವಿಗ್ರಹ -ಫೈಲ್ಸ್ ವಾಪಸ್ ಇಟ್ಟು ಪರಾರಿ!

ಮುಖಕ್ಕೆ ಮಾಸ್ಕ್ ಹಾಕಿಕೊಂಡು ರಾಜಾರೋಷವಾಗಿ ಮನೆಗೆ ನುಗ್ಗಿದ ಕಳ್ಳರು ಮಾಜಿ ಸಚಿವರ ಮನೆಯಲ್ಲಿ ಐಷಾರಾಮಿ ಕಾರು ಕಳ್ಳತನ ಮಾಡಿದ್ದಾರೆ. ಮಾಜಿ ಸಚಿವ ಕೋಟೆ ಶಿವಣ್ಣ ಅವರ ಇನ್ನೋವಾ ಕಾರು ಕಳ್ಳತನವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮೈಸೂರು: ಮುಖಕ್ಕೆ ಮಾಸ್ಕ್ ಹಾಕಿಕೊಂಡು ರಾಜಾರೋಷವಾಗಿ ಮನೆಗೆ ನುಗ್ಗಿದ ಕಳ್ಳರು ಮಾಜಿ ಸಚಿವರ ಮನೆಯಲ್ಲಿ ಐಷಾರಾಮಿ ಕಾರು ಕಳ್ಳತನ ಮಾಡಿದ್ದಾರೆ. ಮಾಜಿ ಸಚಿವ ಕೋಟೆ ಶಿವಣ್ಣ ಅವರ ಇನ್ನೋವಾ ಕಾರು ಕಳ್ಳತನವಾಗಿದ್ದು, ಮೈಸೂರಿನ ವಿಜಯನಗರದ ಮೂರನೇ ಹಂತದ ಮನೆಯಲ್ಲಿ ಘಟನೆ ನಡೆದಿದೆ.

ಜೂನ್‌ 6ರಂದು ಮಧ್ಯರಾತ್ರಿ 1 ಗಂಟೆಯ ವೇಳೆ ಕಳ್ಳತನ ನಡೆದಿದ್ದು, ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಮೈಸೂರಿನ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಂಪೌಂಡ್ ಹಾರಿ ಬಂದು ಮನೆಗೆ ನುಗ್ಗಿದ ಕಳ್ಳರು ಕೀ ತೆಗೆದುಕೊಂಡು ಬಂದು ಕಾರನ್ನು ಓಡಿಸಿಕೊಂಡು ಹೋಗಿದ್ದಾರೆ. ಬಳಿಕ ಕಾರು ಕದ್ದವನು ಮತ್ತೆ ಬಂದು ಫೈಲ್‌ಗಳು ಹಾಗೂ ಗಣಪತಿ ವಿಗ್ರಹವನ್ನು ಇಟ್ಟು ಹೋಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಜೂನ್ 5 ಸಂಜೆ ಕಾರು ನಿಲ್ಲಿಸಿ ಡ್ರೈವರ್ ಕೀ ಕೊಟ್ಟು ಹೋಗಿದ್ದ. ಮಾರನೇ ದಿನ ಬೆಳಿಗ್ಗೆ ಕಾರು ನೋಡಿದರೆ ಕಾಣಲಿಲ್ಲ. ಮನೆಯವರನ್ನು ವಿಚಾರಿಸಿದೆ. ಯಾರೂ ತೆಗೆದುಕೊಂಡು ಹೋಗಿರಲಿಲ್ಲ. ತಕ್ಷಣ ಪೊಲೀಸ್ ಕಮೀಷನರ್‌ ಗೆ ಹೇಳಿದೆ. ತಕ್ಷಣ ಪೊಲೀರು ಬಂದು ಪರಿಶೀಲನೆ ಮಾಡಿದರು.

ಸಿಸಿ.ಟಿವಿ ನೋಡಿದಾಗ ಮಧ್ಯರಾತ್ರಿ 1 ಗಂಟೆಗೆ ಕಾರು ಕಳ್ಳತನ ಆಗಿರೋದು ಗೊತ್ತಾಗಿದೆ. ಆತ ಕಾಂಪೌಂಡ್ ಹಾರಿ ಬಂದಿದ್ದಾನೆ. ಆತನ ಹಿಂದೆ ಯಾರೋ ಸೇರಿಕೊಂಡು ವ್ಯವಸ್ಥಿತವಾಗಿ ಕಳ್ಳತನ ಮಾಡಿದ್ದಾರೆ.

ಕಾರು ಕದ್ದವನು ಮತ್ತೆ ಬಂದು ಫೈಲ್‌ ಗಳು ಹಾಗೂ ಗಣಪತಿ ವಿಗ್ರಹ ಇಟ್ಟು ಹೋಗಿದ್ದಾನೆ ಎಂದು ತಿಳಿದು ಬಂದಿದೆ. ವಿಜಯನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಇದೇ ವೇಳೆ ಗೃಹ ಸಚಿವ ಜಿ.ಪರಮೇಶ್ವರ ಅವರಿಗೂ ದೂರು ನೀಡುವುದಾಗಿ ಶಿವಣ್ಣ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com