ಪ್ರಗತಿ ಪರಿಶೀಲನಾ ಸಭೆಗೆ ಗೈರಾದ ಅಧಿಕಾರಿ ಅಮಾನತು ಮಾಡಿದ ಜಮೀರ್ 

ಉನ್ನತ ಅಧಿಕಾರಿಗಳಿಂದ ಅನುಮತಿ ಪಡೆಯದೆ ವಸತಿ ಸಚಿವ ಜಮೀರ್ ಅಹ್ಮದ್ ಅವರ ಸಭೆಗೆ ಗೈರಾದ  ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ಜಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿನ ಸಭೆ
ಜಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿನ ಸಭೆ

ಬೆಂಗಳೂರು: ಉನ್ನತ ಅಧಿಕಾರಿಗಳಿಂದ ಅನುಮತಿ ಪಡೆಯದೆ ವಸತಿ ಸಚಿವ ಜಮೀರ್ ಅಹ್ಮದ್ ಅವರ ಸಭೆಗೆ ಗೈರಾದ  ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. 

ಜಮೀರ್ ಅವರು ಗುರುವಾರ ಮಂಡಳಿಯ ಅಧಿಕಾರಿಗಳೊಂದಿಗೆ  ಪ್ರಗತಿ ಪರಿಶೀಲನಾ ಸಭೆ ಕರೆದಿದ್ದರು. ಇದೇ ಸಂದರ್ಭದಲ್ಲಿ ಅನುಮತಿ ಪಡೆಯದೇ ಗೈರಾಗಿದ್ದ ಮಂಡ್ಯದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದರ್ಶನ್‌ ಜೈನ್‌ ಅವರನ್ನು ಸಚಿವರು ಸ್ಥಳದಲ್ಲೇ ಅಮಾನತು ಮಾಡುವಂತೆ ಆದೇಶಿಸಿದರು.

ಪ್ರಗತಿ ಪರಿಶೀಲನೆಗೆ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು, ಅನುಮತಿ ಪಡೆಯದೆ ಹಾಗೂ ಸಕಾರಣವಿಲ್ಲದೇ ಸಭೆಗೆ ಗೈರು ಹಾಜರಾಗಿರುವ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಅಲ್ಪಸಂಖ್ಯಾತರ ಸಚಿವರೂ ಆಗಿರುವ ಜಮೀರ್ ಅವರು ಆಗಸ್ಟ್ 1 ರಿಂದ ಪ್ರತಿ ಜಿಲ್ಲೆಗಳಲ್ಲಿ ಜನತಾದರ್ಶನ ನಡೆಸಲಿದ್ದಾರೆ. "ವಸತಿ ಮತ್ತು ಅಲ್ಪಸಂಖ್ಯಾತರ ಇಲಾಖೆಯಡಿಯಲ್ಲಿ ಸೌಲಭ್ಯಗಳು ಮತ್ತು ಸೌಕರ್ಯಗಳಿಗಾಗಿ ಜನರು ಬೆಂಗಳೂರಿಗೆ ಬರುವುದನ್ನು ತಡೆಯುವುದು ಪ್ರತಿ ಜಿಲ್ಲೆಯಲ್ಲೂ ನಡೆಸುವ ಉದ್ದೇಶವಾಗಿದೆ. ಅವರ ಜಿಲ್ಲೆಗಳಲ್ಲಿ ಅವರ ಸಮಸ್ಯೆಗಳನ್ನು ಪರಿಹರಿಸಿ ಎಂದರು.

ಜನತಾದರ್ಶನ ಆರಂಭಗೊಳ್ಳುವ ಮುನ್ನ ಇನ್ನೆರಡು ತಿಂಗಳಲ್ಲಿ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು. ಬಜೆಟ್‌ನಲ್ಲಿ ಮಂಡಳಿಗೆ 500 ಕೋಟಿ ಅನುದಾನ ಕೊಡಿಸುವುದಾಗಿ ಸಚಿವರು ಭರವಸೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com