ರಾಜ್ಯದ ಹಲವೆಡೆ ನೀರಿನ ಅಭಾವ: ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ, ಅಗತ್ಯ ಕ್ರಮಕ್ಕೆ ಸೂಚನೆ

ರಾಜ್ಯದ ಹಲವೆಡೆ ಕುಡಿಯುವ ನೀರಿನ ಅಭಾವದ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶುಕ್ರವಾರ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯದ ಹಲವೆಡೆ ಕುಡಿಯುವ ನೀರಿನ ಅಭಾವದ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶುಕ್ರವಾರ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು, ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು. ಕಳೆದ ವಾರವೇ ನೀಡಿರುವ ಸೂಚನೆ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳನ್ನು ಪರಿಣಾಮಕಾರಿ ರೀತಿಯಲ್ಲಿ ಮಾಡಿಕೊಳ್ಳಬೇಕು ಎಂದು ಹೇಳಿದರು.

ಈ ಸಂಬಂಧ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದೇ ವೇಳೆ ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿಯಾಗಿರುವ ಕುರಿತಂತೆಯೂ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com