
ಧಾರವಾಡ: ಧಾರವಾಡದ ಬೈಪಾಸ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಲಾರಿ-ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತೊರ್ವ ವ್ಯಕ್ತಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
Advertisement