2024ರಲ್ಲಿ ಮತ್ತೊಂದು ಚುನಾವಣೆ; ಮತ್ತೆ ಗ್ಯಾಸ್, ಪೆಟ್ರೋಲ್, ರಸಗೊಬ್ಬರಗಳ ಬೆಲೆ ಇಳಿಸುವ ಭರವಸೆ ನೀಡಿದ ಸಿದ್ದರಾಮಯ್ಯ!

ಮತ್ತೊಂದು ಚುನಾವಣೆಗೆ, ಮತ್ತೊಂದಿಷ್ಟು ಭರವಸೆಗಳು. ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ ರಸಗೊಬ್ಬರ, ಪೆಟ್ರೋಲ್, ಗೃಹಬಳಕೆಯ ಗ್ಯಾಸ್ ಬೆಲೆ ಇಳಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಮೈಸೂರು: ಮತ್ತೊಂದು ಚುನಾವಣೆಗೆ, ಮತ್ತೊಂದಿಷ್ಟು ಭರವಸೆಗಳು. ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ ರಸಗೊಬ್ಬರ, ಪೆಟ್ರೋಲ್, ಗೃಹಬಳಕೆಯ ಗ್ಯಾಸ್ ಬೆಲೆ ಇಳಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ವರುಣಾ ಕ್ಷೇತ್ರದಲ್ಲಿ ನಡೆದ ಕೃತಜ್ಞತಾ ಸಮಾರಂಭವು ಲೋಕಸಭೆ ಮತ್ತು ಪಂಚಾಯಿತಿ ಚುನಾವಣೆಯ ಪ್ರಚಾರವನ್ನು ಪ್ರಾರಂಭಿಸಲು ವೇದಿಕೆಯಾಯಿತು. 

ರಸಗೊಬ್ಬರ ಬೆಲೆ ಏರಿಕೆ ಬಗ್ಗೆ ರೈತರೊಬ್ಬರು ಆಕ್ರೋಶ ವ್ಯಕ್ತಪಡಿಸಿದಾಗ ಮಾತನಾಡಿದ ಸಿದ್ದರಾಮಯ್ಯ ಅವರು, ನಾವು ಬೆಲೆ ಹೆಚ್ಚಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಇದನ್ನು ಮಾಡಿದ್ದಾರೆ. ಅವರು ಅದನ್ನು ಕಡಿಮೆ ಮಾಡಬೇಕು. ನಾವು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಮತ್ತು ಗ್ಯಾಸ್, ಪೆಟ್ರೋಲ್ ಮತ್ತು ರಸಗೊಬ್ಬರಗಳ ಬೆಲೆಯನ್ನು ಕಡಿಮೆ ಮಾಡುತ್ತೇವೆ ಎಂದರು.

ಐದು ಗ್ಯಾರಂಟಿಗಳ ಜಾರಿ ವಿಚಾರದಲ್ಲಿ ಸಾರ್ವಜನಿಕರ ದಾರಿ ತಪ್ಪಿಸುತ್ತಿರುವ ವಿರೋಧ ಪಕ್ಷಗಳು ಮತ್ತು ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ, ಕಾಂಗ್ರೆಸ್ ತನ್ನ ಗ್ಯಾರಂಟಿಗಳಿಂದ ಹಿಂದೆ ಸರಿದಿಲ್ಲ ಮತ್ತು ಅವುಗಳ ಪೂರೈಸಲು 51,000 ಕೋಟಿ ರೂ. ಸಂಗ್ರಹಿಸುತ್ತದೆ ಎಂದು ಅವರು ಹೇಳಿದರು.

'ಬಡವರ ಸಬಲೀಕರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಬೆಂಬಲವನ್ನು ನೀಡುತ್ತಾರೆ ಎಂದು ನಾನು ನಿರೀಕ್ಷಿಸುತ್ತೇನೆ. ಆದರೆ, ಅವರು ರಾಜಕೀಯ ಹೇಳಿಕೆ ನೀಡುತ್ತಿರುವುದು ದುರದೃಷ್ಟಕರ. ಮುಂದಿನ 20 ದಿನಗಳೊಳಗೆ ನಾವು ನೀಡಿರುವ ಐದು ಗ್ಯಾರಂಟಿಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸುತ್ತದೆ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com