ದರೋಡೆ ಪ್ರಕರಣ: ಐವರು ಆರೋಪಿಗಳ ಬಂಧನ

ದರೋಡೆ ಆರೋಪದ ಮೇಲೆ ಐವರು ಆರೋಪಿಗಳನ್ನು ಕುವೆಂಪುನಗರ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಮೈಸೂರು: ದರೋಡೆ ಆರೋಪದ ಮೇಲೆ ಐವರು ಆರೋಪಿಗಳನ್ನು ಕುವೆಂಪುನಗರ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಅನಿಲ್ ಕುಮಾರ್, ನರೇಂದ್ರ, ಪುಟ್ಟಸ್ವಾಮಿ, ಅಭಿಷೇಕ್ ಮತ್ತು ಪ್ರಕಾಶ್ ಎಂದು ಗುರ್ತಿಸಲಾಗಿದ್ದು, ಮತ್ತೊರ್ವ ಆರೋಪಿ ಯೋಗಾನಂದ್ ಅಲಿಯಾಸ್ ಉಪೇಂದ್ರಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಂಧಿತ ಆರೋಪಿಗಳಿಂದ 2 ಲಕ್ಷ ರೂಪಾಯಿ ನಗದು, ಕಾರು, ದ್ವಿಚಕ್ರ ವಾಹನ ಹಾಗೂ ಐದು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಆರೋಪಿಗಳು ಮೇ 3 ರಂದು ಶ್ರೀರಾಂಪುರದಲ್ಲಿರುವ ವಕೀಲ ಜಯಪ್ರಕಾಶ್ ರಾವ್ ಅವರ ಮನೆಯ ಮುಂಬಾಗಿಲು ಮುರಿದು 6 ಲಕ್ಷ ರೂ ಲಪಟಾಯಿಸಿ ಪರಾರಿಯಾಗಿದ್ದರು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಪೊಲೀಸರು ಇದೀಗ ಐವರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com