ಮಹಿಳೆಯರ ಸುಲಭ-ಸುರಕ್ಷತೆ ಪ್ರಯಾಣವೇ ನಮ್ಮ ಆದ್ಯತೆ, ಕೊರತೆ ಇರುವ ಕಡೆ ಬಸ್ಸುಗಳ ಸಂಖ್ಯೆ ಹೆಚ್ಚಳ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಇಂದು ಭಾನುವಾರ ಜೂನ್ 11ರಂದು ಮಧ್ಯಾಹ್ನ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧ ಮುಂದೆ ಸರ್ಕಾರದ 'ಶಕ್ತಿ ಯೋಜನೆ'ಗೆ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಾದ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ.
ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ

ಬೆಂಗಳೂರು: ಇಂದು ಭಾನುವಾರ ಜೂನ್ 11ರಂದು ಮಧ್ಯಾಹ್ನ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧ ಮುಂದೆ ಸರ್ಕಾರದ 'ಶಕ್ತಿ ಯೋಜನೆ'ಗೆ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಾದ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕೊರತೆಯಿರುವ ಕಡೆ ಬಸ್ಸುಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಶಕ್ತಿ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನು ಮೂರು ತಿಂಗಳ ಕಾಲಾವಕಾಶವಿದೆ. ಸ್ಮಾರ್ಟ್ ಪಾಸ್‌ಗಳು ಯಾವುದೇ ಗೌಪ್ಯತೆಯನ್ನು ಉಲ್ಲಂಘಿಸುವುದಿಲ್ಲ. ರಾಜ್ಯದ ಮಹಿಳೆಯರ ಸುಲಭ ಮತ್ತು ಸುರಕ್ಷತೆಯ ಪ್ರಯಾಣವೇ ನಮ್ಮ ಗುರಿ ಎಂದಿದ್ದಾರೆ.
ಈ ಮಧ್ಯೆ ಖಾಸಗಿ ಬಸ್ ಗಳಲ್ಲಿಯೂ ಫ್ರೀ ಬಸ್ ಟಿಕೆಟ್ ಸಿಗುತ್ತಾ ಎಂಬ ಪ್ರಶ್ನೆ ಎದ್ದಿದ್ದು, ಈ ಸಂಬಂಧ ಸ್ಪಷ್ಟನೆ ನೀಡಿರುವ ಸಚಿವರು ಖಾಸಗಿ ಬಸ್‍ಗಳಿಗೆ ಈ ಫ್ರೀ ಪ್ರಯಾಣ ಸೇವೆ ಕೊಡುವ ಯೋಚನೆ ಸದ್ಯಕ್ಕಿಲ್ಲ ಎಂದು ಹೇಳಿದ್ದಾರೆ.

ಎಲ್ಲಾ ಗ್ಯಾರಂಟಿ ಕಾರ್ಯಕ್ರಮಗಳು ಯಶಸ್ವಿಯಾಗಿ ಆಗುತ್ತದೆ. ರಾಜ್ಯದ ಎಲ್ಲಾ ಭಾಗಗಳಲ್ಲಿ ಆಯಾ ಶಾಸಕರು, ಸಂಸದರ ಸಮ್ಮುಖದಲ್ಲಿ ಏಕಾಕಲದಲ್ಲಿ ಚಾಲನೆ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಿಂದ ಮೆಜೆಸ್ಟಿಕ್‍ಗೆ ಬರುತ್ತಾರೆ. ಸ್ಮಾರ್ಟ್ ಕಾರ್ಡ್ (Smart Card) ಆದಷ್ಟು ಬೇಗ ನೀಡುವ ಕೆಲಸ ಆಗುತ್ತದೆ. ಸೇವಾ ಸಿಂಧು ಪೋರ್ಟಲ್ ಸರ್ವರ್ ಸ್ಲೋ ಆದ್ರೆ, ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. 

ಇದೀಗ ಸಮಾರಂಭ ನಡೆಯುವ ವೇದಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಆಗಮಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com