ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಯಲ್ಲಿ ಯಾವುದೇ ಗೊಂದಲವಿಲ್ಲ, ನುಡಿದಂತೆ ನಡೆಯುತ್ತೇವೆ: ಸಿದ್ದರಾಮಯ್ಯ

ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳಲ್ಲಿ ಯಾವುದೇ ಗೊಂದಲವಿಲ್ಲ, ನುಡಿದಂತೆ ನಡೆಯುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಪುನರುಚ್ಛರಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳಲ್ಲಿ ಯಾವುದೇ ಗೊಂದಲವಿಲ್ಲ, ನುಡಿದಂತೆ ನಡೆಯುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಪುನರುಚ್ಛರಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಯೋಜನೆಗಳ ಬಗ್ಗೆ ಎಲ್ಲವನ್ನೂ ಸ್ಪಷ್ಟಪಡಿಸಿದೆ. ಬಿಜೆಪಿಯವರು ತಮ್ಮ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿದ್ದರು. ಆ ಯೋಜನೆಗಳ ಬಗ್ಗೆ ಎಷ್ಟು ಚರ್ಚೆಗಳಾಗಿವೆ? ಪ್ರಧಾನಿ ಮೋದಿ ಅವರು ಅನೇಕ ಭರವಸೆಗಳನ್ನು ನೀಡಿದ್ದರು. ಅವುಗಳಲ್ಲಿ ಎಷ್ಟು ಈಡೇರಿವೆ? ಎಂದು ಪ್ರಶ್ನಿಸಿದರು.

ಮೇ 10 ರಂದು ನಡೆಜ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿರುವ ಎಲ್ಲಾ ಐದು ಭರವಸೆಗಳನ್ನು ಜಾರಿಗೊಳಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಈಗಾಗಲೇ ಪ್ರಕಟಿಸಿದೆ. ಸರ್ಕಾರಿ ಸ್ವಾಮ್ಯದ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾದ ಶಕ್ತಿ ಯೋಜನೆಗೆ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡುತಿದ್ದಾರೆ.

ಈ ನಡುವೆ ಗ್ಯಾರಂಟಿ ಯೋಜನೆಗಳ ಕುರಿತು ಟೀಕೆ ಮಾಡಿರುವ ಬಿಜೆಪಿ, ನಾನಾ ರೀತಿಯ ಷರತ್ತುಗಳನ್ನು ವಿಧಿಸುತ್ತಿರುವುದರಿಂದ, ಯೋಜನೆಗಳ ಅನುಷ್ಠಾನದಲ್ಲಿ ಗೊಂದಲಗಳು ಮೂಡಿವೆ ಎಂದು ಹೇಳಿದೆ.

ಕೇಂದ್ರದ ಮಾಜಿ ಸಚಿವ, ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಾತನಾಡಿ, ಚುನಾವಣೆಗೂ ಮುನ್ನ ಕಾಂಗ್ರೆಸ್ ಉಚಿತ ಯೋಜನೆಗಳ ಅನುಷ್ಠಾನಕ್ಕೆ ತರುವುದಾಗಿ ಭರವಸೆ ನೀಡಿತ್ತು, ಆದರೆ ಈಗ ಷರತ್ತುಗಳನ್ನು ವಿಧಿಸುತ್ತಿದೆ. 200 ಯೂನಿಟ್‌ಗಿಂತ ಕಡಿಮೆ ವಿದ್ಯುತ್ ಬಳಸುವ ಜನರು ತಮ್ಮ ಬಿಲ್‌ಗಳನ್ನು ಪಾವತಿಸಬೇಡಿ ಎಂದು ಜನತೆಗೆ ಕರೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com