ಆಟೋ ಬಾಡಿಗೆ ವಿಚಾರಕ್ಕೆ ಜಗಳ: ಬೆಂಗಳೂರಿನಲ್ಲಿ ಅಸ್ಸಾಂ ಮೂಲದ ಸಹೋದರರ ಮೇಲೆ ಹಲ್ಲೆ, ಓರ್ವ ಸಾವು

ಆಟೋ ಬಾಡಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಬೆಂಗಳೂರಿನ ಯಶವಂತಪುರದ ಸೋಫ್ ಫ್ಯಾಕ್ಟರಿ ಬಳಿ ಭಾನುವಾರ ರಾತ್ರಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಆಟೋ ಬಾಡಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಬೆಂಗಳೂರಿನ ಯಶವಂತಪುರದ ಸೋಫ್ ಫ್ಯಾಕ್ಟರಿ ಬಳಿ ಭಾನುವಾರ ರಾತ್ರಿ ನಡೆದಿದೆ.

ಬಾಡಿಗೆ ವಿಚಾರಕ್ಕೆ ಆಟೋ ಚಾಲಕ ಅಶ್ವಥ್ ಎನ್ನುವಾತ ಇಬ್ಬರು ಪ್ರಯಾಣಿಕರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ. ಈ ಸಂಬಂಧ ಓರ್ವನನ್ನು ಬಂಧಿಸಲಾಗಿದೆ.

ಸುಬ್ರಹ್ಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಯಶವಂತಪುರ ಸೋಪ್ ಫ್ಯಾಕ್ಟರಿ ಬಳಿ ಭಾನುವಾರ ರಾತ್ರಿ ಸಂಭವಿಸಿದ ಘಟನೆಯಲ್ಲಿ ಬಲಿಯಾದವರನ್ನು ಅಸ್ಸಾಂ ಮೂಲದ ಅಹ್ಮದ್ ಎಂದು ಗುರುತಿಸಲಾಗಿದ್ದು, ಅವರ ಸಹೋದರ ಅಯೂಬ್ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತ ಅಹ್ಮದ್ ಮತ್ತು ಗಾಯಗೊಂಡಿರುವ ಅಯೂಬ್ ಇಬ್ಬರು ಸಹೋದರರು. ಇವರಿಬ್ಬರು ಉದ್ಯೋಗ ಅರಸಿ ಬೆಂಗಳೂರಿಗೆ ಬಂದು ಯಶವಂತಪುರದಲ್ಲಿ ವಾಸವಿದ್ದರು. ಎಂದಿನಂತೆ ನಿನ್ನೆ ರಾತ್ರಿ ಕೆಲಸ ಮುಗಿಸಿ ಆಟೋ ಹಿಡಿದು ಮನೆಗೆ ಹೊರಟಿದ್ದಾರೆ.

ಆಟೋ ಹತ್ತಿಸಿಕೊಂಡು ಚಾಲಕ, ಡಬಲ್ ಬಾಡಿಗೆ ಕೇಳಿದ್ದಾನೆ. ಈ ವಿಚಾರಕ್ಕೆ ಜಗಳವಾಗಿದ್ದು,  ಮಾತಿಗೆ ಮಾತು ಬೆಳೆದು ಈ ವೇಳೆ ಆಟೋ ಚಾಲಕ ಮಾರಾಕಾಸ್ತ್ರಗಳಿಂದ ಸಹೋದರರ ಮೇಲೆ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಅಹ್ಮದ್ ಮೃತಪಟ್ಟಿದ್ದು, ಅಯೂಬ್ ಗಂಭೀರ ಗಾಯಗಳಾಗಿವೆ. ಈ ಬಗ್ಗೆ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com