ರಾಜ್ಯ

ಜೂನ್ 15ಕ್ಕೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ ಸಾಧ್ಯತೆ

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಫಲಿತಾಂಶವು ಜೂನ್ 15 ರಂದು ಪ್ರಕಟವಾಗುವ ಸಾಧ್ಯತೆಯಿದೆ.

ಜೂನ್ 15ಕ್ಕೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ ಸಾಧ್ಯತೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಫಲಿತಾಂಶವು ಜೂನ್ 15 ರಂದು ಪ್ರಕಟವಾಗುವ ಸಾಧ್ಯತೆಯಿದೆ. ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ, ಜೂನ್ 12 ಮತ್ತು ಜೂನ್ 14 ರ ನಡುವೆ ಪ್ರಾಧಿಕಾರ ಫಲಿತಾಂಶ ಪ್ರಕಟಿಸಲು ಯೋಜಿಸಿತ್ತು. ಆದರೆ, ಯಾವುದೇ ನಿರ್ದಿಷ್ಟ ದಿನಾಂಕ ಹೇಳಿರಲಿಲ್ಲ.  ಆದಾಗ್ಯೂ, ಜೂನ್ 14 ಸಂಜೆಯೊಳಗೆ ಫಲಿತಾಂಶ ಪ್ರಕಟಿಸಲು ಸಿದ್ಧವಾಗಲಿದೆ ಎಂದು ಅವರು ಹೇಳಿದರು.

ಫಲಿತಾಂಶ ಸಿದ್ಧವಾಗಿದ್ದರೂ ಜೂನ್ 15 ರ ಬೆಳಿಗ್ಗೆಯವರೆಗೆ ಫಲಿತಾಂಶ ಪ್ರಕಟಿಸುವುದನ್ನು ಪ್ರಾಧಿಕಾರ ತಡೆಹಿಡಿಯುತ್ತದೆ ಎಂದು ಅವರು ಹೇಳಿದರು. ಸಂಜೆ ಫಲಿತಾಂಶ ಪ್ರಕಟಿಸಿದರೆ, ಅಭ್ಯರ್ಥಿಗಳು ರಿಸಲ್ಟ್ ಪಡೆಯಲು ಕಷ್ಟಪಡುತ್ತಾರೆ. ಯಾವುದೇ ಸರ್ವರ್ ಸಮಸ್ಯೆಗಳನ್ನು ಸರಿಪಡಿಸಲು ಸಹ ಕಷ್ಟವಾಗುತ್ತದೆ. ಈ ಕಾರಣದಿಂದಾಗಿ, ನಾವು ಜೂನ್ 15 ರ ಬೆಳಿಗ್ಗೆ ಫಲಿತಾಂಶಗಳನ್ನು ಪ್ರಕಟಿಸುತ್ತೇವೆ ಎಂದು ಅವರು ತಿಳಿಸಿದರು. 

ಅಭ್ಯರ್ಥಿಗಳು ಫಲಿತಾಂಶ ಪಡೆಯಲು ಸಾಕಷ್ಟು ಸಮಯವಿರುತ್ತದೆ ಮತ್ತು ಯಾವುದೇ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಿಕೊಳ್ಳಬಹುದು ಎಂದು ಅವರು ಹೇಳಿದರು. ಮೇ 20 ಮತ್ತು 21 ರಂದು ನಡೆದಿದ ಕೆಸಿಇಟಿಯಲ್ಲಿ ಸುಮಾರು 2.60 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.