ಸಂಗ್ರಹ ಚಿತ್ರ
ರಾಜ್ಯ
ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ: 'ಶಕ್ತಿ' ಬಸ್ ನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!
ಚಾಲಕನ ಸಮಯಪ್ರಜ್ಞೆಯಿಂದಾಗಿ ಚಿತ್ರದುರ್ಗದಲ್ಲಿ ಸಂಭವಿಸಬಹುದಾದ ದೊಡ್ಡ ದುರಂತವೊಂದು ತಪ್ಪಿದೆ.
ಚಿತ್ರದುರ್ಗ: ಚಾಲಕನ ಸಮಯಪ್ರಜ್ಞೆಯಿಂದಾಗಿ ಚಿತ್ರದುರ್ಗದಲ್ಲಿ ಸಂಭವಿಸಬಹುದಾದ ದೊಡ್ಡ ದುರಂತವೊಂದು ತಪ್ಪಿದೆ.
‘ಶಕ್ತಿ’ ಯೋಜನೆಗೆ ಅಲಂಕೃತಗೊಂಡಿದ್ದ ಕೆಎಸ್‌ಆರ್‌ಟಿಸಿ ಬಸ್ ಚಿತ್ರದುರ್ಗದಿಂದ ಬೆಂಗಳೂರಿಗೆ ಹೊರಟಿತ್ತು. ಬಸ್ ಚಾಲಕ ಲಾರಿಯನ್ನು ಹಿಂದಿಕ್ಕಲು ಯತ್ನಿಸಿದ್ದಾನೆ. ಈ ವೇಳೆ ಲಾರಿ ಚಾಲಕ ಯಾವುದೇ ಸೂಚನೆ ನೀಡದೆ ಲಾರಿಯನ್ನು ಬಸ್ ಬರುತ್ತಿದ್ದ ರಸ್ತೆಯ ಬದಿಗೆ ತಿರುಗಿಸಿದ್ದಾನೆ.
ಅಪಾಯವನ್ನು ಅರಿತ ಕೆಎಸ್‌ಆರ್‌ಟಿಸಿ ಬಸ್ ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾನೆ. ಲಾರಿ ಮತ್ತು ರಸ್ತೆಯ ಗೋಡೆಯ ನಡುವೆ ಸಿಲುಕಿಕೊಡಿದೆ. ಆದರೆ, ಘಟನೆಯಲ್ಲಿ ಯಾರೊಬ್ಬರೂ ಗಾಯಗೊಂಡಿಲ್ಲ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಇಬ್ಬರೂ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ