ಹೆಲ್ಪ್ ಲೈನ್ ಹೆಸರಲ್ಲಿ ಒಬ್ಬರಿಗೆ ತಿಂಗಳಿಗೆ 4 ಲಕ್ಷ ರೂ. ವೇತನ: ತನಿಖೆಗೆ ಸಚಿವ ಜಮೀರ್ ಅಹ್ಮದ್ ಆದೇಶ

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಲ್ಪ್‌ಲೈನ್ ಹೆಸರಿನಲ್ಲಿ ಒಬ್ಬರಿಗೆ ತಿಂಗಳಿಗೆ ಬರೋಬ್ಬರಿ 4 ಲಕ್ಷ ರೂ. ವೇತನ ಪಾವತಿ ಮಾಡಿದ ಸಂಬಂಧ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್‌ ಅವರು ಸಮಗ್ರ ತನಿಖೆಗೆ...
ಜಮೀರ್ ಅಹ್ಮದ್ ಖಾನ್
ಜಮೀರ್ ಅಹ್ಮದ್ ಖಾನ್

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಲ್ಪ್‌ಲೈನ್ ಹೆಸರಿನಲ್ಲಿ ಒಬ್ಬರಿಗೆ ತಿಂಗಳಿಗೆ ಬರೋಬ್ಬರಿ 4 ಲಕ್ಷ ರೂ. ವೇತನ ಪಾವತಿ ಮಾಡಿದ ಸಂಬಂಧ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್‌ ಅವರು ಸಮಗ್ರ ತನಿಖೆಗೆ ಆದೇಶಿಸಿದ್ದಾರೆ.

ಅಲ್ಪಸಂಖ್ಯಾತರ ಇಲಾಖೆ ಯೋಜನೆ ಬಗ್ಗೆ ಮಾಹಿತಿ ನೀಡಲು ಈ ಹೆಲ್ಪ್‌ಲೈನ್​ ಸ್ಥಾಪನೆ ಮಾಡಲಾಗಿತ್ತು. ಹೆಲ್ಪ್​ಲೈನ್ ನಿರ್ವಹಣೆ ಮಾಡಿದ ಒಬ್ಬರಿಗೆ ತಿಂಗಳಿಗೆ ನಾಲ್ಕು ಲಕ್ಷ ರೂಪಾಯಿ ವೇತನ ನೀಡಿರುವ ಆರೋಪ ಕೇಳಿಬಂದಿದೆ.

ಈ ಹೆಲ್ಪ್​​ಲೈನ್​ನಿಂದ ಯಾವುದೇ ಪ್ರಯೋಜನ ಆಗದಿದ್ದರೂ ಅದನ್ನು ಮುಂದುವರಿಸಿದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸಚಿವ ಜಮೀರ್ ಅಹ್ಮದ್ ಖಾನ್​ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತ ಮೂರು ಪಟ್ಟು ವೇತನ ಒಬ್ಬರಿಗೇ ಮಾಸಿಕ ನೀಡಿದ್ದು ಹೇಗೆ? ಸಹಾಯವಾಣಿ ಕೇಂದ್ರಕ್ಕೆ ವಾರ್ಷಿಕ 2.5 ಕೋಟಿ ರೂ. ವೆಚ್ಚ ಆಗುತ್ತಿದೆ. ಆದರೆ ಪ್ರತ್ಯೇಕವಾಗಿ ಹೆಲ್ಪ್​ಲೈನ್ ವ್ಯವಸ್ಥೆಯ ಅಗತ್ಯತೆ ಏನಿತ್ತು ಎಂದು ಜಮೀರ್ ಅಹ್ಮದ್ ಖಾನ್ ಪ್ರಶ್ನೆ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com