ಬಡವರು, ಮಧ್ಯಮ ವರ್ಗದವರಿಗೆ ಹೆಚ್ಚಿನ ಹಣ ಸಿಕ್ಕರೆ, ಆರ್ಥಿಕತೆ ವೃದ್ಧಿಯಾಗುತ್ತದೆ: ಸಿಎಂ ಸಿದ್ದರಾಮಯ್ಯ

ಶ್ರೀಮಂತರ ಬದಲು ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೆಚ್ಚಿನ ಹಣ ಸಿಕ್ಕರೆ, ಅದು ಆರ್ಥಿಕತೆಗೆ ಉತ್ತೇಜನ ನೀಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶ್ರೀಮಂತರ ಬದಲು ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೆಚ್ಚಿನ ಹಣ ಸಿಕ್ಕರೆ, ಅದು ಆರ್ಥಿಕತೆಗೆ ಉತ್ತೇಜನ ನೀಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಮಹಿಳೆಯರ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಬಡವರು, ಮಧ್ಯಮ ವರ್ಗದವರಿಗೆ ಹೆಚ್ಚಿನ ಹಣ ಸಿಕ್ಕರೆ, ಆರ್ಥಿಕತೆ ವೃದ್ಧಿಯಾಗುತ್ತದೆ. ಹೀಗಾಗಿ ಗ್ಯಾರಂಟಿ ಯೋಜನೆಗಳ ಮೂಲಕ ಬಡವರು ಮತ್ತು ಮಧ್ಯಮ ವರ್ಗದವರ ಕೈಗೆ ಹಣ ಸಿಗುವಂತೆ ಮಾಡುತ್ತೇವೆಂದು ಹೇಳಿದರು.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಡವರ ಕಷ್ಟವನ್ನು ನಿವಾರಿಸುವುದು ನಮ್ಮ ಗುರಿಯಾಗಿದೆ. ಬಡವರಿಗೆ ಸಹಾಯ ಮಾಡಿ ಅಧಿಕಾರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದನ್ನು ನೋಡಿ ಅರಗಿಸಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ.

ಸರ್ಕಾರ ರಚನೆಯಾದ ಕೇವಲ 20 ದಿನಗಳಲ್ಲಿ ಮೊದಲ ಭರವಸೆ ಜಾರಿಯಾಗಿದೆ. ರಾಜ್ಯಾದ್ಯಂತ ಮಹಿಳೆಯರು ಗ್ಯಾರಂಟಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಮುಂದಾಗಿದ್ದಾರೆ. ಕಳೆದ ಎರಡು ವಾರಗಳಲ್ಲಿ ಬಿಜೆಪಿಯು ಸುಳ್ಳು ಸುದ್ದಿಗಳನ್ನು ಹರಡುತ್ತಿದೆ, ಆದರೆ ಸರ್ಕಾರವು ಗ್ಯಾರಂಟಿ ಯೋಜನೆಗಳ ಜಾರಿಯೊಂದಿಗೆ ಅವುಗಳು ತಪ್ಪು ಎಂದು ಸಾಬೀತುಪಡಿಸಿದೆ.

ನಾವು ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ. ಶಕ್ತಿ ಯೋಜನೆಯು ಮಹಿಳೆಯರ ಸಬಲೀಕರಣದ ಗುರಿಯನ್ನು ಹೊಂದಿದೆ. ಷೇ.50ರಷ್ಟು ಜನಸಂಖ್ಯೆ ಹೊಂದಿರುವ ಮಹಿಳೆಯರಿಲ್ಲದೆ ದೇಶ ಪ್ರಗತಿ ಹೊಂದಲು ಸಾಧ್ಯವಿಲ್ಲ. ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹಿಳೆಯರೂ ಸಮಾನ ಪಾಲುದಾರರು. ಬಿಜೆಪಿ ಸರಕಾರ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಶೇ.30ರಿಂದ ಶೇ.24ಕ್ಕೆ ಇಳಿಸಿತ್ತು. ರಾಜ್ಯದ 41.86 ಲಕ್ಷಕ್ಕೂ ಹೆಚ್ಚು ಮಹಿಳೆಯರು ತಮ್ಮ ಧರ್ಮ ಮತ್ತು ಜಾತಿಯನ್ನು ಲೆಕ್ಕಿಸದೆ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com