ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಹೆಚ್ಚಿನ ಲೈಂಗಿಕ ಕಾರ್ಯಕರ್ತೆಯರು 'ಚೇತನಾ ಯೋಜನೆ' ಬಳಸಿಕೊಳ್ಳುತ್ತಿಲ್ಲ!

ರಾಜ್ಯದಲ್ಲಿನ ಲೈಂಗಿಕ ಕಾರ್ಯಕರ್ತೆಯರು ಪರ್ಯಾಯ ವೃತ್ತಿ ಆಯ್ಕೆಗಳನ್ನು ಒದಗಿಸುವ ಗುರಿಯೊಂದಿಗೆ ಚೇತನಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಆದರೆ, ರಾಜ್ಯದಲ್ಲಿ ಶೇಕಡಾ ಒಂದಕ್ಕಿಂತ ಕಡಿಮೆ ಲೈಂಗಿಕ ಅಲ್ಪಸಂಖ್ಯಾತರು ಈ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.
Published on

ಬೆಂಗಳೂರು: ರಾಜ್ಯದಲ್ಲಿನ ಲೈಂಗಿಕ ಕಾರ್ಯಕರ್ತೆಯರು ಪರ್ಯಾಯ ವೃತ್ತಿ ಆಯ್ಕೆಗಳನ್ನು ಒದಗಿಸುವ ಗುರಿಯೊಂದಿಗೆ ಚೇತನಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಆದರೆ, ರಾಜ್ಯದಲ್ಲಿ ಶೇಕಡಾ ಒಂದಕ್ಕಿಂತ ಕಡಿಮೆ ಲೈಂಗಿಕ ಅಲ್ಪಸಂಖ್ಯಾತರು ಈ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ಈ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗಕ್ಕಾಗಿ ಮತ್ತು ಗೌರವಯುತ ಜೀವನ ನಡೆಸಲು ಲೈಂಗಿಕ ಕಾರ್ಯಕರ್ತೆಯರಿಗೆ 30,000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತದೆ.

ಈ ಯೋಜನೆಗೆ ಪ್ರತಿ ವರ್ಷ 2 ಕೋಟಿ ರೂ. ಮೀಸಲಿಡಲಾಗುತ್ತದೆ. ನಿಧಿಯ ಕೊರತೆಯಿಂದಾಗಿ  ಪ್ರತಿ ವರ್ಷ 651 ಲೈಂಗಿಕ ಕಾರ್ಯಕರ್ತೆಯರಿಗೆ  ಮಾತ್ರ ಹಣಕಾಸಿನ ನೆರವು ಪೂರೈಸಲು ಸಾಧ್ಯವಾಗುತ್ತದೆ. ಪುನರ್ವಸತಿಗೆ ಸಿದ್ಧರಿರುವ ಹೆಚ್ಚಿನ ಲೈಂಗಿಕ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಲು ನಾಲ್ಕು ಪಟ್ಟು ಮೌಲ್ಯದ ನಿಧಿಯ ಅಗತ್ಯವಿದೆ ಎಂದು ರಾಜ್ಯ ಮಹಿಳಾ ಆಯೋಗದ ಜನರಲ್ ಮ್ಯಾನೇಜರ್ ಪಾಲಿ ಎಂಜಿ ಹೇಳಿದರು.ಯೋಜನೆಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಆಯೋಗ ಮನವಿ ಮಾಡಿದ್ದರೂ ಈಡೇರಿಲ್ಲ. ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿನ ಹಣದ ಕೊರತೆ ಇದಕ್ಕೆ ಕಾರಣ ಎಂದು ಅವರು ತಿಳಿಸಿದರು.

ಕರ್ನಾಟಕದಲ್ಲಿ ಸುಮಾರು 3 ಲಕ್ಷ ಲೈಂಗಿಕ ಕಾರ್ಯಕರ್ತೆಯರು ವಾಸಿಸುತ್ತಿದ್ದಾರೆ ಎಂದು ಅಧ್ಯಯನಗಳು ತೋರಿಸಿವೆ, ಆದರೆ ಇಲಾಖೆಗೆ ನಿಗದಿಪಡಿಸಿದ ಸೀಮಿತ ಹಣದ ಕಾರಣ ಅವರಲ್ಲಿ ಕಡಿಮೆ ಸಂಖ್ಯೆಯವರಿಗೆ ಮಾತ್ರ ನೆರವು ಸಿಗಬಹುದು. 
ಕಳೆದ ವರ್ಷದವರೆಗೆ ಸಣ್ಣ ಉದ್ದಿಮೆ ಸ್ಥಾಪಿಸಲು ಇಚ್ಛಿಸುವ ಆಸಕ್ತ ಲೈಂಗಿಕ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗಿದೆ  ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸಾಲಿಡಾರಿಟಿ ಫೌಂಡೇಶನ್‌ನ ಕಾರ್ಯನಿರ್ವಾಹಕ ನಿರ್ದೇಶಕಿ ಶುಭಾ ಚಾಕೋ ಮಾತನಾಡಿ, ಕರ್ನಾಟಕದಲ್ಲಿ ವೇಶ್ಯಾವಾಟಿಕೆ ವ್ಯವಸ್ಥೆ ಇಲ್ಲದೇ ಇರುವುದರಿಂದ ಅನೇಕರು ತಮ್ಮನ್ನು ಲೈಂಗಿಕ ಕಾರ್ಯಕರ್ತೆಯರೆಂದು ಘೋಷಿಸಿಕೊಳ್ಳಲು ಹೆದರುತ್ತಿದ್ದಾರೆ.ಪುನರ್ವಸತಿ ಪಡೆಯಲು ಬಯಸುವ ಆಸಕ್ತಿ ಹೊಂದಿರುವ ಲೈಂಗಿಕ ಕಾರ್ಯಕರ್ತರನ್ನು ಕೈ ಹಿಡಿಯುವ ಅವಶ್ಯಕತೆಯಿದೆ ಎಂದು ಅವರು ಹೇಳಿದರು.

30,000 ರೂಪಾಯಿಗಳು ಸಣ್ಣ ಮೊತ್ತವಾಗಿದೆ ಮತ್ತು ಲೈಂಗಿಕ ಕಾರ್ಯಕರ್ತರಿಗೆ ಪರ್ಯಾಯ ಜೀವನೋಪಾಯವನ್ನು ಉತ್ತೇಜಿಸಲು ಕನಿಷ್ಠ 1,00,000 ರೂಪಾಯಿಗಳಿಗೆ ಹೆಚ್ಚಿಸಬೇಕು ಎಂದು ಲೈಂಗಿಕ ಕಾರ್ಯಕರ್ತೆಯರ ಹಕ್ಕುಗಳಿಗಾಗಿ ಕೆಲಸ ಮಾಡುವ ಇತರ ಎನ್‌ಜಿಒಗಳು ಒತ್ತಾಯಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com