ಟೀಕೆಗಳಿಗೆ ಕುಗ್ಗಲ್ಲ, ಈ ಕ್ಷಣ ಗುರಿ ಮುಟ್ಟಲು ನನ್ನನ್ನು ಮತ್ತಷ್ಟು ದೃಢವಾಗಿಸಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಕೊಟ್ಟ ಮಾತಿನಂತೆ ಮಹಿಳೆಯರಿಗೆ ಉಚಿತ ಪ್ರಯಾಣ ಶಕ್ತಿ ಯೋಜನೆಗೆ ಭಾನುವಾರ ಚಾಲನೆ ನೀಡಿದೆ. ಯೋಜನೆ ಆರಂಭವಾದ ಬೆನ್ನಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಪ್ರಯಾಣ ಮಾಡಲು ಆರಂಭಿಸಿದ್ದಾರೆ.
ಬಸ್ಸಿಗೆ ನಮಸ್ಕರಿಸುತ್ತಿರುವ ಮಹಿಳೆ.
ಬಸ್ಸಿಗೆ ನಮಸ್ಕರಿಸುತ್ತಿರುವ ಮಹಿಳೆ.

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಕೊಟ್ಟ ಮಾತಿನಂತೆ ಮಹಿಳೆಯರಿಗೆ ಉಚಿತ ಪ್ರಯಾಣ ಶಕ್ತಿ ಯೋಜನೆಗೆ ಭಾನುವಾರ ಚಾಲನೆ ನೀಡಿದೆ. ಯೋಜನೆ ಆರಂಭವಾದ ಬೆನ್ನಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಪ್ರಯಾಣ ಮಾಡಲು ಆರಂಭಿಸಿದ್ದಾರೆ.

ಇದರಂತೆ ನಿನ್ನೆ ಧಾರವಾಡ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರು ಬಸ್ಸಿಗೆ ನಮಸ್ಕರಿಸಿ ಬಸ್ ಹತ್ತಿದ್ದು, ಈ ಚಿತ್ರ ಮುಖ್ಯಮಂತ್ರಿಗಳ ಮನ ಗೆದ್ದಿದೆ.

ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟಿದ್ದೇವೆ. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು.

ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ. ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com