ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಇಬ್ಬರು ಓರ್ವ ಬಾಲಕಿ, ಯುವತಿ ದುರ್ಮರಣ

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬಾಲಕಿಯರು ದುರ್ಮರಣ ಹೊಂದಿದ್ದು ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚನ್ನಪಟ್ಟಣ: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬಾಲಕಿಯರು ದುರ್ಮರಣ ಹೊಂದಿದ್ದು ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು ಮೃತರನ್ನು 13 ವರ್ಷದ ಬಾಲಕಿ ಹಾಗೂ 20 ಯುವತಿ ಎಂದು ತಿಳಿದುಬಂದಿದೆ.   

ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಹೆಚ್.ಡಿ.ಕೋಟೆಯಿಂದ ಬೆಂಗಳೂರಿಗೆ ವಾಪಸ್ ಆಗುವ ವೇಳೆ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. 

ಈ ವೇಳೆ ಕಾರ್ ನಲ್ಲಿದ್ದ ಒಟ್ಟು 6 ಜನರಲ್ಲಿ ಇಬ್ಬರು ಸಾವನ್ನಪ್ಪಿದ್ದು ಮೂವರಿಗೆ ಗಂಭೀರ ಗಾಯ ಹಾಗೂ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com