118 ಕೋಟಿ ರೂ. ನಕಲಿ ಬಿಲ್ ಹಗರಣ: 8 ಬಿಬಿಎಂಪಿ ಅಧಿಕಾರಿಗಳು ಅಮಾನತು!

ಬಿಬಿಎಂಪಿಯಲ್ಲಿನ 118 ಕೋಟಿ ರೂಪಾಯಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಎಂಟು ಅಧಿಕಾರಿಗಳನ್ನು ಏಕಕಾಲಕ್ಕೆ ಅಮಾನತು ಮಾಡಲಾಗಿದೆ. 
ಬಿಬಿಎಂಪಿ ಕಚೇರಿ(ಸಂಗ್ರಹ ಚಿತ್ರ)
ಬಿಬಿಎಂಪಿ ಕಚೇರಿ(ಸಂಗ್ರಹ ಚಿತ್ರ)

ಬೆಂಗಳೂರು: 118 ಕೋಟಿ ರೂಪಾಯಿ ಮೊತ್ತದ ನಕಲಿ ಬಿಲ್ ಸೃಷ್ಟಿಸಿದ ಆರೋಪದಲ್ಲಿ ಎಂಟು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಂಜಿನಿಯರ್‌ಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಅಲ್ಲದೆ ಹಗರಣದ ತನಿಖೆಗಾಗಿ ಬೆಂಗಳೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ತನಿಖಾ ಅಧಿಕಾರಿಯಾಗಿ ನೇಮಿಸಿದೆ.

ಲೋಕಾಯುಕ್ತ ವರದಿಯ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ಈ ಕಠಿಣ ಕ್ರಮವನ್ನು ಕೊಂಡಿದ್ದು ಸತೀಶ್‌ ಸಹಾಯಕ ಕಾರ್ಯಪಾಲಕ ಅಭಿಯಂತರರು, ದೊಡ್ಡಯ್ಯ ಮುಖ್ಯ ಅಭಿಯಂತರರು ಟಿವಿಸಿಸಿ, ಸಿದ್ದರಾಮಯ್ಯ ಸಹಾಯಕ ಅಭಿಯಂತರರು, ಬಸವರಾಜ್ ಪ್ರಭಾರ ಕಾರ್ಯಪಾಲಕ ಅಭಿಯಂತರರು, ಉಮೇಶ್ ಸಹಾಯಕ ಅಭಿಯಂತರು, ವೆಂಕಟಲಕ್ಷ್ಮೀ, ಸಹಾಯಕ ಕಾರ್ಯಾಪಾಲಕ ಅಭಿಯಂತರರು, ಶ್ರೀನಿವಾಸ್ ಕಾರ್ಯಪಾಲಕ ಅಭಿಯಂತರರು, ಶ್ರೀತೇಜ್, ಸಹಾಯಕ ಕಾರ್ಯಾಪಾಲಕ ಅಭಿಯಂತರನನ್ನು ಅಮಾನತು ಮಾಡಿದೆ.

ಆರ್ ಆರ್ ನಗರ ವಲಯದಲ್ಲಿ ಸುಮಾರು 118 ಕೋಟಿ ರುಪಾಯಿ ಕಾಮಗಾರಿಯಲ್ಲಿ ಅಕ್ರಮ ಕಂಡುಬಂದಿದ್ದು ಈ ಬಗ್ಗೆ ಸಂಸದ ಡಿಕೆ ಸುರೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲೋಕಾಯುಕ್ತ ತನಿಖೆಯಲ್ಲಿ ಅಧಿಕಾರಿಗಳು ಆರೋಪ ಮಾಡಿರುವುದು ಸಾಬೀತಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com