ಕೊಡಗಿನಲ್ಲಿ ರಸ್ತೆ ಅಪಘಾತ: ಸ್ಕೂಟರ್-ಬೈಕ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಸಾವು

ಸ್ಕೂಟರ್-ಬೈಕ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಕುಶಾಲನಗರದ ಇಂದಿರಾ ಬಡಾವಣೆಯ ನಿವಾಸಿ 21 ವರ್ಷದ ಭಾವನಾ ಎಂದು ಗುರುತಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಡಗು: ಸ್ಕೂಟರ್-ಬೈಕ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಶಾಲನಗರದಲ್ಲಿ ಶುಕ್ರವಾರ ನಡೆದಿದೆ.

ಮೃತರನ್ನು ಕುಶಾಲನಗರದ ಇಂದಿರಾ ಬಡಾವಣೆಯ ನಿವಾಸಿ 21 ವರ್ಷದ ಭಾವನಾ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಫೀಲ್ಡ್ ಮಾರ್ಷಲ್ ಕೆ.ಎಂ. ಕರಿಯಪ್ಪ ಕಾಲೇಜಿನ ವಿದ್ಯಾರ್ಥಿನಿ ಭಾವನಾ ತನ್ನ ಸ್ನೇಹಿತೆಯೊಂದಿಗೆ ಕೂರ್ಗ್ ಸಿನೆಪ್ಲೆಕ್ಸ್ ಬಳಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಮೋಟಾರ್ ಸೈಕಲ್ ಡಿಕ್ಕಿ ಹೊಡೆದಿದೆ.

ತೀವ್ರವಾಗಿ ಗಾಯಗೊಂಡ ಭಾವನಾ ಅವರನ್ನು ತಕ್ಷಣವೇ ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಭಾವನಾ ಜೊತೆ ಪ್ರಯಾಣಿಸುತ್ತಿದ್ದ ಯುವತಿಗೂ ಗಂಭೀರ ಗಾಯಗಳಾಗಿದ್ದು, ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಬೈಕ್ ಸಮೇತ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com