ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಮುಂದೂಡಿಕೆ: ಇನ್ನೂ 4-5 ದಿನ ವಿಳಂಬ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹ ಲಕ್ಷ್ಮಿ’ ಯೋಜನೆಗೆ (ಪ್ರತಿ ಮನೆಯ ಮಹಿಳೆಗೆ 2,000 ರೂ.) ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇನ್ನೂ 4-5 ದಿನ ವಿಳಂಬವಾಗಲಿದೆ ಎಂದು ತಿಳಿದುಬಂದಿದೆ.
ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹ ಲಕ್ಷ್ಮಿ’ ಯೋಜನೆಗೆ (ಪ್ರತಿ ಮನೆಯ ಮಹಿಳೆಗೆ 2,000 ರೂ.) ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇನ್ನೂ 4-5 ದಿನ ವಿಳಂಬವಾಗಲಿದೆ ಎಂದು ತಿಳಿದುಬಂದಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಶುಕ್ರವಾರದಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿತ್ತು. ಸಂಪುಟ ಸಭೆಯಲ್ಲಿ ಹಿರಿಯ ಸದಸ್ಯರು ನೀಡಿದ ಸಲಹೆಗಳ ಹಿನ್ನೆಲೆಯಲ್ಲಿ ಇನ್ನೂ 4-5 ದಿನಗಳ ಬಳಿಕ ಪೂರ್ಣ ಸಿದ್ಧತೆಯೊಂದಿಗೆ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಯೋಜನೆಗೆ 1.28 ಕೋಟಿ ಜನ ನೋಂದಣಿ ಮಾಡಿಸಬೇಕಿರುವುದರಿಂದ ಹೆಚ್ಚು ಕಡೆ ನೋದಣಿಗೆ ಅವಕಾಶ ನೀಡುತ್ತಿರುವ ಕಾರಣ ಅರ್ಜಿ ಸಲ್ಲಿಕೆ ವಿಳಂಬವಾಗಲಿದೆ ಎಂದು ತಿಳಿಸಿದರು.

ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿರ್ಧರಿಸಲಾಗಿದೆ. ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸ್ವೀಕರಿಸಲಾಗುತ್ತದೆ. ಸಚಿವ ಸಂಪುಟದಲ್ಲಿ ನಡೆದ ಚರ್ಚೆಯ ವೇಳೆ ಯೋಜನೆ ಕುರಿತು ಚರ್ಚೆ ನಡೆಸಲಾಯಿತು. ಅರ್ಜಿ ಸಲ್ಲಿಕೆ ವೇಳೆ ಎದುರಾಗುವ ನೂಕುನುಗ್ಗಲು ಎದುರಾಗುವ ಸಾಧ್ಯತೆಗಳಿವೆ ಎಂಬ ಅಭಿಪ್ರಾಯಗಳು ವ್ಯಕ್ತವಾಯಿದು. ಕೆಲವು ಸಚಿವರು ಮತ್ತು ಅಧಿಕಾರಿಗಳು ಗ್ರಾಮ ಪಂಚಾಯಿತಿ ಮತ್ತು ನಾಡಕಚೇರಿ ಕೇಂದ್ರಗಳಲ್ಲಿನ ಬಾಪೂಜಿ ಸೇವಾ ಕೇಂದ್ರವನ್ನು ಕೂಡ ಬಳಕೆ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ. ಯೋಜನೆಯನ್ನು ಹೆಚ್ಚು ಜನಸ್ನೇಹಿಯನ್ನಾಗಿ ಮಾಡಲು ಅರ್ಜಿ ಪ್ರಕ್ರಿಯೆಯು 4-5 ದಿನಗಳಿಂದ ವಿಳಂಬವಾಗಲಿದೆ ಎಂದರು.

ಸಚಿವ ಸಂಪುಟ ಸಭೆಗೂ ಮುನ್ನ ಮಾತನಾಡಿದ್ದ ಸಚಿವೆ, ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅರ್ಜಿ ನಮೂನೆಗೆ ಚಾಲನೆ ನೀಡಲಿದ್ದು, ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com