ಹುಬ್ಬಳ್ಳಿ: ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಕಿರೇಸೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ವಿದ್ಯಾರ್ಥಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿ ವಿಸ್ತೃತ ಬೆಳಗಲಿ ಮೃತಪಟ್ಟ ವಿದ್ಯಾರ್ಥಿ. ಏಳನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ ನಾಗವಿ ಗಾಯಗೊಂಡ ವಿದ್ಯಾರ್ಥಿಯಾಗಿದ್ದಾನೆ.
ಇಂದು ಬೆಳಗ್ಗೆ ಶಾಲೆಗೆ ಬಂದ ಮಕ್ಕಳು ನಿರ್ಮಾಣ ಹಂತದಲ್ಲಿರುವ ಶಾಲಾ ಕೊಠಡಿ ಬಳಿ ಆಟವಾಡುತ್ತಿದ್ದಾಗ ಏಕಾಏಕಿ ಗೋಡೆ ಕುಸಿದು ಮಕ್ಕಳ ಮೇಲೆ ಬಿದ್ದಿದೆ. ಇದರಿಂದಾಗಿ ಬಾಲಕ ವಿಸ್ತ್ರತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement