ಪಠ್ಯಪುಸ್ತಕ ಪರಿಷ್ಕರಣೆ: ಹೆಡಗೇವಾರ್'ಗೆ ಕೋಕ್ ನೀಡಿ ನೆಹರು ಪತ್ರ ಸೇರಿಸಿದ ರಾಜ್ಯ ಸರ್ಕಾರ!

ಕರ್ನಾಟಕ ರಾಜ್ಯ ಪಠ್ಯಕ್ರಮ ಪಠ್ಯಪುಸ್ತಕಗಳು ಮತ್ತೊಮ್ಮೆ ಬದಲು ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಪಠ್ಯಪುಸ್ತಕ ಪರಿಷ್ಕರಣೆ ಕುರಿತ ನಿರ್ಧಾರಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲೂ ಅನುಮೋದನೆ ದೊರೆತಿದೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯ ಪಠ್ಯಕ್ರಮ ಪಠ್ಯಪುಸ್ತಕಗಳು ಮತ್ತೊಮ್ಮೆ ಬದಲು ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಪಠ್ಯಪುಸ್ತಕ ಪರಿಷ್ಕರಣೆ ಕುರಿತ ನಿರ್ಧಾರಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲೂ ಅನುಮೋದನೆ ದೊರೆತಿದೆ.

ಕಳೆದ ವರ್ಷ, ಪಠ್ಯಪುಸ್ತಕಗಳಲ್ಲಿ ವಿಶೇಷವಾಗಿ 10 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿತ್ತು.

ಹಿಂದಿನ ಸರ್ಕಾರ ಅವಧಿಯಲ್ಲಿ ಸೇರ್ಪಡೆಯಾಗಿದ್ದ ಆರ್'ಎಸ್ಎಸ್ ಸಂಸ್ಥಾಪಕ ಕೇಶವಬಲಿರಾಮ್ ಹೆಡಗೇವಾರ್, ಬರಹಗಾರ ಚಕ್ರವರ್ತಿ ಸೂಲಿಬೆಲೆ ಬರೆದಿರುವ ಗದ್ಯ, ಸಾವರ್ಕರ್ ಕುರಿತ ಪಠ್ಯ ಹಾಗೂ ಲೇಖಕ ಬನ್ನಂಜೆ ಗೋವಿಂದಾಚಾರ್ಯ ಅವರ ಪಠ್ಯಗಳನ್ನು ಕೈಬಿಡಲಾಗಿದೆ.

ಇನ್ನು ಹಿಂದಿನ ಸರ್ಕಾರ ಕೈಬಿಟ್ಟಿದ್ದ ಸಾವಿತ್ರಿಬಾಯಿ ಪುಲೆ, ಅಂಬೇಡ್ಕರ್ ಅವರ ಕುರಿತ ನೀ ಹೋದ ಮರು ದಿನ ಲೇಖನ, ನೆಹರೂ ಅವರು ಮಗಳಿಗೆ ಬರೆದ ಪತ್ರ, ಟಿಪ್ಪು ಸುಲ್ತಾನ್ ಕುರಿತ ಪಠ್ಯ ಸೇರಿದಂತೆ ಹಲವು ವಿಚಾರಗಳನ್ನು ಸೇರ್ಪಡೆ ಮಾಡಲಾಗಿದೆ.

10 ನೇ ತರಗತಿಯ ಪಠ್ಯಪುಸ್ತಕಕ್ಕೆ ತಕ್ಷಣದ ತಿದ್ದುಪಡಿಗಳನ್ನು ಮಾಡಲು ಸರ್ಕಾರ ನಿರ್ಧರಿಸಿದೆ, ಆದರೆ, 6-9ನೇ ತರಗತಿಗಳ ಪಠ್ಯಪುಸ್ತಕಗಳನ್ನು ಮುಂದಿನ ವರ್ಷಗಳಲ್ಲಿ ಕ್ರಮೇಣ ಬದಲಾವಣೆಗಳನ್ನು ತರಲಾಗುತ್ತದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.

ಸಚಿವ ಸಂಪುಟ ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಆರ್​ಎಸ್​ಎಸ್ ಸಂಸ್ಥಾಪಕ ಕೇಶವ ಹೆಡ್ಗೇವಾರ್​ ಭಾಷಣ ತೆಗೆದಿದ್ದೇವೆ. ಸಾವರ್ಕರ್, ಚಕ್ರವರ್ತಿ ಸೂಲಿಬೆಲೆ ಬರೆದ ಅಂಶಗಳನ್ನು ಸಹ ತೆಗೆದಿದ್ದೇವೆ. ಮಕ್ಕಳು ಸರಿಯಾದ ವಿಚಾರ ಕಲಿಯಬೇಕೆಂದು ಕೆಲ ಬದಲಾವಣೆ ಮಾಡಿದ್ದೇವೆ. ನಾವು ತುಂಬಾ ಆಳವಾಗಿ ಹೋಗಬೇಕಾಗಿತ್ತು, ಹಾಗೆ ಮಾಡಿಲ್ಲ. ಸರ್ಕಾರಕ್ಕೆ ಹೊರೆಯಾಗದಂತೆ ಸರಳವಾಗಿ ಪಠ್ಯ ಪರಿಷ್ಕರಿಸಿದ್ದೇವೆ ಎಂದು ಹೇಳಿದರು.

ಪಠ್ಯ ಪುಸ್ತಕ ಪರಿಷ್ಕರಣೆಗೆ ರಾಜಪ್ಪ ದಳವಾಯಿ ನೇತೃತ್ವದಲ್ಲಿ ಐವರ ಸಮಿತಿ ರಚಿಸಲಾಗಿದೆ. ಕನ್ನಡದಲ್ಲಿ ಸಮಾಜ ವಿಜ್ಞಾನದಲ್ಲಿ 6ರಿಂದ 10ನೇ ತರಗತಿಯವರೆಗೆ ಕೆಲವು ಬದಲಾವಣೆ ಮಾಡಲಾಗಿದೆ. ಸಪ್ಲಿಮೆಂಟರಿ ವಿಚಾರ ನೀಡಿ ಮಕ್ಕಳಿಗೆ ಹೊರೆಯಾಗದಂತೆ ಬದಲಾವಣೆ ಮಾಡಿದ್ದು, ಸಾವಿತ್ರಿ ಫುಲೆ ಅವರ ನೀ ಹೋದ ಮರು ದಿನ ವಿಚಾರ ಮತ್ತು ಇಂದಿರಾ ಗಾಂಧಿಗೆ ನೆಹರು ಬರೆದಿದ್ದ ‘ನೀ ಬರೆದ ಪತ್ರ’ ಮರುಸೇರ್ಪಡೆ ಮಾಡಲಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com