ಬೆಳಗಾವಿ ಭೀಕರ ಸರಣಿ ಅಪಘಾತ: ಇಬ್ಬರು ಸಾವು

ಬೆಳಗಾವಿ: ಕಾರು, ಕಂಟೇನರ್ಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ಸ್ವಾಮೀಜಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಶನಿವಾರ ನಡೆದಿದೆ.
ಅಪಘಾತದಲ್ಲಿ ಬೆಳಗಾವಿ ತಾಲೂಕಿನ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ಗಂಭೀರವಾದ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.
ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿಸಿ ಇಂದು ಬೆಳಗಾವಿಯಲ್ಲಿ ವಿಶ್ವ ಹಿಂದೂ ಪರಿಷತ್- ಭಜರಂಗದಳ ಆಶ್ರಯದಲ್ಲಿ ಪ್ರತಿಭಟನೆ ಆಯೋಜನೆಗೊಂಡಿತ್ತು.
ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಬೆಳಗಾವಿಗೆ ಭೇಟಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.
ಬೆಳಗಾವಿಗೆ ಬರುತ್ತಿದ್ದ ಸ್ವಾಮೀಜಿ ಕಾರು ಮಾರ್ಗ ಮಧ್ಯೆ ಅಪಘಾತಕ್ಕಿಡಾಗಿದ್ದು, ವಾಹನದಲ್ಲಿದ್ದ ಸ್ವಾಮೀಜಿಯ ಇಬ್ಬರು ಸೇವಕರು ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ.
ಕಂಟೇನರ್ ಚಾಲಕ ದಿಢೀರ್ ಬ್ರೇಕ್ ಹಾಕಿದ್ದರಿಂದ ಸ್ವಾಮೀಜಿ ಅವರಿದ್ದ ಕಾರು ಕಂಟೇನರ್ಗೆ ಗುದ್ದಿದೆ, ಇದೇ ವೇಳೆ ಕಾರಿಗೆ ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಕಂಟೇನರ್ ಕಾರಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಗಾಯಗೊಂಡಿದ್ದ ಸ್ವಾಮೀಜಿಗಳನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


