ಶಕ್ತಿ ಯೋಜನೆಗೆ ಆಟೋರಿಕ್ಷಾ ಚಾಲಕರ ವಿರೋಧ!

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಗೆ ಬೆಳಗಾವಿಯ ಆಟೋರಿಕ್ಷಾಗಳ ಮಾಲೀಕರು ಹಾಗೂ ಚಾಲಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯ ಸಿಟಿ ಬಸ್ ನಿಲ್ದಾಣದ ಎದುರು ಆಟೋ-ರಿಕ್ಷಾಗಳ ಮಾಲೀಕರು ಮತ್ತು ಚಾಲಕರು ಪ್ರತಿಭಟನೆ ನಡೆಸುತ್ತಿರುವುದು.
ಬೆಳಗಾವಿಯ ಸಿಟಿ ಬಸ್ ನಿಲ್ದಾಣದ ಎದುರು ಆಟೋ-ರಿಕ್ಷಾಗಳ ಮಾಲೀಕರು ಮತ್ತು ಚಾಲಕರು ಪ್ರತಿಭಟನೆ ನಡೆಸುತ್ತಿರುವುದು.

ಬೆಳಗಾವಿ: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಗೆ ಬೆಳಗಾವಿಯ ಆಟೋರಿಕ್ಷಾಗಳ ಮಾಲೀಕರು ಹಾಗೂ ಚಾಲಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಯೋಜನೆ ಆರಂಭಿಸಿದ ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿ ಆಟೋರಿಕ್ಷಾಗಳ ಮಾಲೀಕರು ಹಾಗೂ ಚಾಲಕರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಯೋಜನೆಯಿಂದಾಗಿ ನಮ್ಮ ವ್ಯವಹಾರದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ನಮ್ಮ ಆದಾಯ ಕೂಡ ಶೇ.50ರಷ್ಟು ಇಳಿಕೆಯಾಗಿದೆ. ಇದರಿಂದ ಜೀವನ ನಡೆಸುವುದು ಅಸಾಧ್ಯವಾಗಿದೆ ಎಂದು ಆಟೋರಿಕ್ಷಾ ಚಾಲಕರು ಹೇಳಿದ್ದಾರೆ.

ಆಟೋರಿಕ್ಷಾ ಚಾಲಕರ ಪ್ರತಿಭಟನೆಯಿಂದಾಗಿ ನಗರದ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು. ಬಳಿಕ ಸ್ಥಳಕ್ಕೆ ಧಾವಿಸಿ ಪೊಲೀಸರು, ಪ್ರತಿಭಟನಾಕಾರರ ಮನವೊಲಿಸಿ ಧರಣಿ ಹಿಂಪಡೆಯಲು ಯತ್ನಿಸಿದರು.

ಈ ವೇಳೆ ಯೋಜನೆ ಹಿಂಪಡೆಯದಿದ್ದರೆ ಪ್ರತಿಭಟನೆ ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com