ಚುನಾವಣೆಯಲ್ಲಿ ಗೆಲುವು: ತಮ್ಮ ಪರ ಶ್ರಮಿಸಿದ ಅಭಿಮಾನಿಗಳಿಗೆ ಔತಣಕೂಟ ಏರ್ಪಡಿಸಿದ ಸಚಿವ ರಾಮಲಿಂಗಾ ರೆಡ್ಡಿ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಗೆಲುವಿಗಾಗಿ ಶ್ರಮಿಸಿದ ಅಭಿಮಾನಿಗಳು, ಕಾರ್ಯಕರ್ತರಿಗಾಗಿ ಸಚಿವ ರಾಮಲಿಂಗಾ ರೆಡ್ಡಿಯವರು ಔತಣಕೂಟವನ್ನು ಭಾನುವಾರ ಆಯೋಜಿಸಿದ್ದಾರೆ.
ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಗೆಲುವಿಗಾಗಿ ಶ್ರಮಿಸಿದ ಅಭಿಮಾನಿಗಳು, ಕಾರ್ಯಕರ್ತರಿಗಾಗಿ ಸಚಿವ ರಾಮಲಿಂಗಾ ರೆಡ್ಡಿಯವರು ಔತಣಕೂಟವನ್ನು ಭಾನುವಾರ ಆಯೋಜಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಬಿ.ಟಿ.ಎಂ ವಿಧಾನಸಭಾ ಕ್ಷೇತ್ರದ ಶಾಸಕರನ್ನಾಗಿ ಆಯ್ಕೆ ಮಾಡಿದ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸೌಮ್ಯ ರೆಡ್ಡಿರವರ ಪರವಾಗಿ ಶ್ರಮಿಸಿದ ಎಲ್ಲರಿಗೂ ತುಂಬು ಹೃದಯದ ಕೃತಘ್ನತೆಗಳನ್ನು ಸಲ್ಲಿಸುತ್ತಿದ್ದೇನೆ. ಗೆಲುವಿಗೆ ಶ್ರಮಿಸಿದ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗಾಗಿ ಭಾನುವಾರ ಔತಣಕೂಡವನ್ನು ಏರ್ಪಡಿಸಲಾಗಿದೆ. ನಿಮ್ಮೆಲ್ಲರಿಗೂ  ಹೃತ್ಪೂರ್ವಕವಾಗಿ ಆಹ್ವಾನಿಸುತ್ತಿದ್ದೇನೆಂದು ಹೇಳಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕರಲ್ಲಿ ರಾಮಲಿಂಗಾ ರೆಡ್ಡಿ ಕೂಡ ಒಬ್ಬರು, ರಾಮಲಿಂಗಾ ರೆಡ್ಡಿಯವರು ಈ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಮಲಿಂಗಾ ರೆಡ್ಡಿಯವರು ಬಿಟಿಎಂ ಲೇಔಟ್​​ ಕ್ಷೇತ್ರದಿಂದ ಸ್ಪರ್ಧೆಗಿಳಿದಿದ್ದರು. ಚುನಾವಣಾ ಫಲಿತಾಂಶ ಮೇ.13ರಂದು ಪ್ರಕಟಗೊಂಡಿತ್ತು. ರಾಮಲಿಂಂಗಾ ರೆಡ್ಡಿಯವರು, ಬಿಜೆಪಿ ಅಭ್ಯರ್ಥಿ ಕೆ.ಆರ್.ಶ್ರೀಧರ್​ ವಿರುದ್ಧ 14 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com