ವಿದ್ಯುತ್ ದರ ಹೆಚ್ಚಳವನ್ನು ಮುಂದೂಡುವಂತೆ ಇಂಧನ ಸಚಿವರಿಗೆ ಪತ್ರ ಬರೆದ ಬೆಂಗಳೂರಿನ ಹೋಟೆಲ್ ಮಾಲೀಕರು

ವಿದ್ಯುತ್ ದರದಲ್ಲಿ ಭಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್ ಮಾಲೀಕರು ಇಂಧನ ಸಚಿವ ಕೆಜೆ ಜಾರ್ಜ್ ಅವರಿಗೆ ಪತ್ರ ಬರೆದಿದ್ದು, ವಿದ್ಯುತ್ ದರದಲ್ಲಿ ಮಾಡಿರುವ ಏರಿಕೆಯನ್ನು ಕನಿಷ್ಠ ಒಂದು ವರ್ಷಕ್ಕೆ ಮುಂದೂಡುವಂತೆ ಒತ್ತಾಯಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ವಿದ್ಯುತ್ ದರದಲ್ಲಿ ಭಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್ ಮಾಲೀಕರು ಇಂಧನ ಸಚಿವ ಕೆಜೆ ಜಾರ್ಜ್ ಅವರಿಗೆ ಪತ್ರ ಬರೆದಿದ್ದು, ವಿದ್ಯುತ್ ದರದಲ್ಲಿ ಮಾಡಿರುವ ಏರಿಕೆಯನ್ನು ಕನಿಷ್ಠ ಒಂದು ವರ್ಷಕ್ಕೆ ಮುಂದೂಡುವಂತೆ ಒತ್ತಾಯಿಸಿದ್ದಾರೆ.

ಕರ್ನಾಟಕ ವಿದ್ಯುಚ್ಛಕ್ತಿ ಆಯೋಗವು ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಪ್ರತಿ ಯೂನಿಟ್‌ಗೆ 70 ಪೈಸೆಯಷ್ಟು ದರ ಏರಿಸಲು ಒಪ್ಪಿಗೆ ಸೂಚಿಸಿದೆ. ಕೈಗಾರಿಕಾ ಬಳಕೆಯ ವಿದ್ಯುತ್ ಶುಲ್ಕವನ್ನು 125 ರೂ.ನಿಂದ 250 ರೂ.ಗೆ ಏರಿಕೆ ಮಾಡಲಾಗಿದೆ.

'ಇಂಧನ ಹೊಂದಾಣಿಕೆ ಶುಲ್ಕಗಳ ಹೆಚ್ಚಳ ಮತ್ತು ಸುಂಕದ ಏರಿಕೆಯೊಂದಿಗೆ ಸ್ಥಿರ ಬೇಡಿಕೆ ಶುಲ್ಕಗಳು ನಮ್ಮ ಆರ್ಥಿಕ ಹೊರೆಗಳನ್ನು ಹೆಚ್ಚಿಸಿವೆ' ಎಂದು ಬ್ರುಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ (ಬಿಬಿಎಚ್ಎ) ಅಧ್ಯಕ್ಷ ಪಿಸಿ ರಾವ್ ಹೇಳಿದ್ದಾರೆ.

ದರ ಏರಿಕೆ ಬದಲಿಗೆ ಸರ್ಕಾರವು ವಿದ್ಯುತ್‌ ಸರಬರಾಜು ಮತ್ತು ವಿತರಣೆ ಸಮಯದಲ್ಲಿ ಆಗುವ ನಷ್ಟವನ್ನು ಕಡಿಮೆ ಮಾಡುವತ್ತ ಗಮನ ಹರಿಸಬೇಕು ಮತ್ತು ಆಡಳಿತ ವೆಚ್ಚವನ್ನು ಸರಳೀಕರಿಸುವತ್ತ ಗಮನ ಹರಿಸಬೇಕು ಎಂದು ಹೋಟೆಲ್ ಮಾಲೀಕರು ಸಲಹೆ ನೀಡಿದರು. ಇದಲ್ಲದೆ, ತೆರಿಗೆಯನ್ನು ಶೇ 9 ರಿಂದ ಶೇ 3ಕ್ಕೆ ಇಳಿಸುವಂತೆ ಕೋರಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳು ಪಾವತಿಸಬೇಕಾದ ಬಾಕಿ ಮೊತ್ತವನ್ನು ಬಡ್ಡಿ ಸಹಿತ ವಸೂಲಿ ಮಾಡಬೇಕು. ಪ್ರಿಪೈಡ್ ಮೀಟರ್ ಅಳವಡಿಕೆ ಮಾಡಿ ಗ್ರಾಹಕರ ಠೇವಣಿ ಹಣವನ್ನು ಹಿಂತಿರುಗಿಸಬೇಕು ಎಂದು ಮನವಿ ಮಾಡಿದೆ.

ನಮ್ಮ ಉದ್ಯಮವು ವಿದ್ಯುತ್ ದರದ ಏರಿಕೆಯ ಭಾರವನ್ನು ಹೊರುತ್ತಿದೆ ಮತ್ತು ಉದ್ಯಮದ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಾವು ವಿನಂತಿಸುತ್ತೇವೆ ಎಂದು ರಾವ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com