ಕರ್ನಾಟಕದಲ್ಲಿರುವ ಅನಧಿಕೃತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ: ಶಿಕ್ಷಣ ಸಚಿವರಿಗೆ ಪೋಷಕರ ಒತ್ತಾಯ

ರಾಜ್ಯದ ಅನಧಿಕೃತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ಪೋಷಕರ ತಂಡ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಒತ್ತಾಯಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದ ಅನಧಿಕೃತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ಪೋಷಕರ ತಂಡ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಒತ್ತಾಯಿಸಿದೆ. ಕಳೆದ ಕೆಲವು ವರ್ಷಗಳಿಂದ ಶಿಕ್ಷಣ ಕ್ಷೇತ್ರವನ್ನು ಕಾಡುತ್ತಿರುವ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡುವಂತೆಯೂ ಮನವಿ ಮಾಡಿದ್ದಾರೆ. 

ರಾಜ್ಯದಲ್ಲಿ ಅನಧಿಕೃತ ಶಾಲೆಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಅವುಗಳಿಗೆ ಕಡಿವಾಣ ಹಾಕಲು ಕಾನೂನು ರಚಿಸುವುದು ಅಥವಾ ಆಯೋಗವನ್ನು ನೇಮಿಸುವುದು ಸೇರಿದಂತೆ ಹಲವು ಬೇಡಿಕೆಗಳೊಂದಿಗೆ ಪೋಷಕರು ಸಚಿವರಿಗೆ ಮನವಿ ಸಲ್ಲಿಸಿದರು. 'ಹಲವು ದಶಕಗಳಿಂದ ಶಿಕ್ಷಣ ಕ್ಷೇತ್ರ ಜ್ವಲಂತ ಸಮಸ್ಯೆಗಳಿಂದ ಬಳಲುತ್ತಿದೆ. ಅವುಗಳನ್ನು ಪರಿಹರಿಸುವ ಉದ್ದೇಶವನ್ನು ಹಿಂದಿನ ಸರ್ಕಾರಕ್ಕೆ ನೀಡದಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರ ದುರದೃಷ್ಟವಾಗಿದೆ ಎಂದು ಸಚಿವರನ್ನು ಭೇಟಿ ಮಾಡಿದ ತಂಡ ಹೇಳಿದೆ. 

ಪೋಷಕರ ಆರೋಪಗಳೇನು?: ಕಳೆದ ವರ್ಷ, ಕರ್ನಾಟಕದಲ್ಲಿ ಸುಮಾರು 1,600 ಅನಧಿಕೃತ ಶಾಲೆಗಳು ಪತ್ತೆಯಾದ ನಂತರ ಸಾಕಷ್ಟು ವಿವಾದ ಹುಟ್ಟಿಕೊಂಡಿತ್ತು. ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿಯೊಂದಿಗೆ ಅನಧಿಕೃತ ಶಾಲೆಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಅನಧಿಕೃತ ಶಾಲೆಗಳಿಗೆ ಮಕ್ಕಳನ್ನು ಸೇರಿಸದಂತೆ ಪೋಷಕರ ಅನುಕೂಲಕ್ಕಾಗಿ ಪಟ್ಟಿಯನ್ನು ಸಾರ್ವಜನಿಕಗೊಳಿಸುವಂತೆ ಪೋಷಕರು ಸಚಿವರನ್ನು ಕೋರಿದ್ದಾರೆ. 

2018-19ರಲ್ಲಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರವು ತಿದ್ದುಪಡಿ ಮಾಡಿದ ಶಿಕ್ಷಣ ಹಕ್ಕು (RTE) ಕಾಯಿದೆಯನ್ನು ಅದರ ಪೂರ್ಣ ಸಾಮರ್ಥ್ಯಕ್ಕೆ ಮರುಸ್ಥಾಪಿಸಬೇಕು ಎಂದು ಪೋಷಕರು ಬಯಸಿದ್ದರು, ತಿದ್ದುಪಡಿಯು 1.52 ಲಕ್ಷ ವಿದ್ಯಾರ್ಥಿಗಳ ದಾಖಲಾತಿಯನ್ನು ಕಡಿತಗೊಳಿಸಿದೆ. ಅವರು RTE ಕೋಟಾವನ್ನು 10ನೇ ತರಗತಿಯವರೆಗೆ ವಿಸ್ತರಿಸಬೇಕೆಂದು ಕೋರಿದರು.

ಪಠ್ಯಪುಸ್ತಕ, ಸಮವಸ್ತ್ರದ ಬೆಲೆ ಏರಿಕೆ ಮಾಡಿರುವ ಖಾಸಗಿ ಶಾಲೆಗಳು ಮತ್ತು ಖಾಸಗಿ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಹ ಸಚಿವರನ್ನು ಒತ್ತಾಯಿಸಿದರು. ಕರ್ನಾಟಕ ಪಠ್ಯಪುಸ್ತಕ ಸೊಸೈಟಿಯಿಂದ ಉಚಿತವಾಗಿ ಪಡೆಯುವ ಪಠ್ಯಪುಸ್ತಕಗಳನ್ನು ಹಲವು ಶಾಲೆಗಳು ಹಣಕ್ಕಾಗಿ ಮಾರಾಟ ಮಾಡುತ್ತಿವೆ ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com