ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಉತ್ತರದಾಯಿತ್ವ ಇಲ್ಲದಿದ್ದರೆ ಜನಪ್ರತಿನಿಧಿಗಳಾಗಲು ಅನರ್ಹರು: ಸಿಎಂ ಸಿದ್ದರಾಮಯ್ಯ

ಉತ್ತರದಾಯಿತ್ವ ಇರುವ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಅಗತ್ಯ ನಮ್ಮ ದೇಶಕ್ಕೆ ಹೆಚ್ಚಾಗಿದೆ. ಉತ್ತರದಾಯಿತ್ವ ಇಲ್ಲದಿದ್ದರೆ ನಾವು ಈ ಸ್ಥಾನದಲ್ಲಿ, ಈ ಹುದ್ದೆಯಲ್ಲಿರಲು ಅನರ್ಹರು ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. 
Published on

ಬೆಂಗಳೂರು: ಉತ್ತರದಾಯಿತ್ವ ಇರುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಅಗತ್ಯ ನಮ್ಮ ದೇಶಕ್ಕೆ ಹೆಚ್ಚಾಗಿದೆ. ಉತ್ತರದಾಯಿತ್ವ ಇಲ್ಲದಿದ್ದರೆ ಜನಪ್ರತಿನಿಧಗಳಾಗಲು,

ಇನ್ ಸೈಟ್ ಐಎಎಸ್ ಅಕಾಡೆಮಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯುಪಿಎಸ್ ಸಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕೆಲಸ ಮಾಡುವ ಹೊಣೆಗಾರಿಕೆ ಐಎಎಸ್, ಕೆಎಎಸ್ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳ ಮೇಲಿರುತ್ತದೆ ಎಂದರು. 

ಬಹುಸಂಖ್ಯಾತ ಸಮುದಾಯ ಅಕ್ಷರ ಕಲಿಕೆಯಿಂದ ವಂಚಿತವಾಗಿದೆ. ಇದಕ್ಕೆ ಸಮಾಜದಲ್ಲಿರುವ ಅಸಮಾನತೆ ಕಾರಣ. ಈ ಅಸಮಾನತೆಯನ್ನು ಅಳಿಸಲು ಸಾಧ್ಯವಾಗದಿದ್ದರೆ, ಆ ದಿಕ್ಕಿನಲ್ಲಿ ಶ್ರಮಿಸದಿದ್ದರೆ ನಾವು ಜನಪ್ರತಿನಿಧಿಗಳಾಗಿ, ಐಎಎಸ್-ಕೆಎಎಸ್ ಅಧಿಕಾರಿಗಳಾಗಿ ಏನು ಪ್ರಯೋಜನ ಎಂದು ಪ್ರಶ್ನಿಸಿದರು. 

ಈ ಅಸಮಾನತೆ, ತಾರತಮ್ಯ ಅಳಿಸಲು ಯತ್ನಿಸದೇ ಹೋದರೆ ಈ ದೇಶದ ಜನರೇ ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡುತ್ತಾರೆ ಎನ್ನುವ ಎಚ್ಚರಿಕೆಯ ಮಾತನ್ನು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದರು.  ಈ ಎಚ್ಚರಿಕೆಯ ಮಾತನ್ನು ನೆನಪಿನಲ್ಲಿ ಇಟ್ಟುಕೊಂಡು ಅಸಮಾನತೆ, ತಾರತಮ್ಯವನ್ನು ಅಳಿಸಬೇಕು. ಹಸಿದವರಿಗೆ ಮಾತ್ರ ಊಟದ ಮಹತ್ವ ಗೊತ್ತಿರತ್ತೆ. ಹಸಿವಿನಿಂದ ನರಳುವವರಿಗೆ ನೆರವಾದರೆ ಮಾತ್ರ ಐಎಎಸ್, ಕೆಎಎಸ್ ನಲ್ಲಿ ಟಾಪರ್ಸ್ ಆಗಿರುವುದಕ್ಕೂ ಸಾರ್ಥಕತೆ ಬರುತ್ತದೆ ಎಂದರು. 

ಹಸಿವು ಗೊತ್ತಿರುವ ಹಳ್ಳಿ ಮಕ್ಕಳನ್ನು ಐಎಎಸ್ ಗಳಾಗಿ ಮಾಡಿ ಎಂದು ಇನ್ ಸೈಟ್ ಸಂಸ್ಥೆಗೆ ಕಿವಿಮಾತು ಹೇಳಿದರು. ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು, ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಮತ್ತಿತರರು ಉಪಸ್ಥಿತರಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com