ವಿದ್ಯುತ್ ದರ ಏರಿಕೆ ಹಿಂಪಡೆಯಲು ಸಾಧ್ಯವಿಲ್ಲ: ಸಚಿವ ಕೆಜೆ ಜಾರ್ಜ್ 

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ) ಅನುಮೋದಿಸಿರುವ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ರಂಭಾಪುರಿ ಪೀಠದಲ್ಲಿ ಸ್ವಾಮೀಜಿ ಆಶೀರ್ವಾದ ಪಡೆದ ಕೆ.ಜೆ. ಜಾರ್ಜ್
ರಂಭಾಪುರಿ ಪೀಠದಲ್ಲಿ ಸ್ವಾಮೀಜಿ ಆಶೀರ್ವಾದ ಪಡೆದ ಕೆ.ಜೆ. ಜಾರ್ಜ್

ಬಾಳೆಹೊನ್ನೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ) ಅನುಮೋದಿಸಿರುವ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ರಂಭಾಪುರಿ ಪೀಠಕ್ಕೆ ಭಾನುವಾರ ಭೇಟಿ ನೀಡಿ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ವರ್ಷದ ನವೆಂಬರ್ ನಿಂದ ದರ ಏರಿಕೆ ಪ್ರಕ್ರಿಯೆ ಆರಂಭವಾಗಿದೆ. 2023ರ ಮಾರ್ಚ್ ನಲ್ಲಿಯೇ ದರ ಏರಿಕೆ ಆಗಬೇಕಿತ್ತು. ಆದರೆ, ಆಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಏರಿಕೆ ಆಗಿರಲಿಲ್ಲ. ಚುನಾವಣೆ ಮುಗಿದ ನಂತರ ಮೇ 12 ರಿಂದ ಅನ್ವಯವಾಗುವಂತೆ ವಿದ್ಯುತ್ ದರ ಏರಿಕೆ ಮಾಡಲಾಗಿದೆ ಎಂದರು.

ಹಿಂದಿನ ಬಿಜೆಪಿ ಸರ್ಕಾರವೇ ವಿದ್ಯುತ್ ದರ ಏರಿಕೆ ಮಾಡಿದ್ದು, ಜುಲೈನಿಂದ ಯಾವುದೇ ದರ ಏರಿಕೆ ಆದರೂ ಅದನ್ನು ಸರ್ಕಾರವೇ ಭರಿಸಲಿದೆ. ಆದರೆ, ಹಿಂದಿನ ಬಾಕಿಯನ್ನು ಗ್ರಾಹಕರೇ ಭರಿಸಬೇಕು ಎಂದು ಅವರು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com