ಕೆಸಿಸಿಐ ಬಂದ್ ಕರೆ ನಡುವೆಯೇ ವಿದ್ಯುತ್ ದರ ಏರಿಕೆ ಕುರಿತು ಕೈಗಾರಿಕಾ ಸಂಸ್ಥೆಗಳೊಂದಿಗೆ ಸಿದ್ದರಾಮಯ್ಯ ಸಭೆ

ವಿದ್ಯುತ್ ದರ ಏರಿಕೆಗೆ ಕೆಲವು ಕೈಗಾರಿಕಾ ಸಂಸ್ಥೆಗಳು ಆಕ್ರೋಶ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಕೈಗಾರಿಕೋದ್ಯಮಿಗಳೊಂದಿಗೆ ಸಭೆ ಕರೆದು ಅವರ ಆತಂಕಗಳ ಬಗ್ಗೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿದ್ಯುತ್ ದರ ಏರಿಕೆಗೆ ಕೆಲವು ಕೈಗಾರಿಕಾ ಸಂಸ್ಥೆಗಳು ಆಕ್ರೋಶ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಕೈಗಾರಿಕೋದ್ಯಮಿಗಳೊಂದಿಗೆ ಸಭೆ ಕರೆದು ಅವರ ಆತಂಕಗಳ ಬಗ್ಗೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

ಮುಂದಿನ ತಿಂಗಳಿನಿಂದ ವಿದ್ಯುತ್ ಬಿಲ್‌ ಕಡಿಮೆ ಬರಲಿದೆ ಎಂದೂ ಮುಖ್ಯಮಂತ್ರಿ ಹೇಳಿದರು.

ಹುಬ್ಬಳ್ಳಿ ಮೂಲದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಸಿಸಿಐ) ಜೂನ್ 22 ರಂದು ಬಂದ್‌ಗೆ ಕರೆ ನೀಡಿದ್ದರಿಂದ, ಎದ್ದಿರುವ ಸಮಸ್ಯೆಗಳನ್ನು ಪರಿಹರಿಸಲು ಕೈಗಾರಿಕಾ ಸಂಸ್ಥೆಗಳ ಪದಾಧಿಕಾರಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

'ಅವರಿಗೆ ಮನವರಿಕೆ ಮಾಡಲು, ಸತ್ಯ ಮತ್ತು ಅಂಕಿಅಂಶಗಳನ್ನು ನೀಡಲಾಗಿದೆ. ಅವರು ಮನವರಿಕೆ ಮಾಡಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ನಮ್ಮ ಅಧಿಕಾರಿಗಳು ಸಹ ಅವರೊಂದಿಗೆ ಮಾತನಾಡಿದ್ದಾರೆ' ಎಂದು ಸಿದ್ದರಾಮಯ್ಯ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ವಿದ್ಯುತ್ ಸುಂಕ ಏರಿಕೆಯು ಕಡಿಮೆಯಾಗುವುದಿಲ್ಲ. ಎರಡು ತಿಂಗಳ ಹೆಚ್ಚುವರಿ ದರ ಸೇರಿ ಒಂದೇ ಬಿಲ್ ಬಂದಿದ್ದರಿಂದ ಈ ತಿಂಗಳು ವಿದ್ಯುತ್ ಶುಲ್ಕದಲ್ಲಿ ಹೆಚ್ಚಳವಾಗಿದೆ. ಮುಂದಿನ ತಿಂಗಳಿನಿಂದ ಒಂದೇ ತಿಂಗಳ ಬಿಲ್ ಬರುವುದರಿಂದ ಎಲ್ಲವೂ ಸರಿಯಾಗಲಿದೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com