ಕೊಡಗಿನ ಅರಣ್ಯದಲ್ಲಿ ಹುಲಿಯ ಮೃತದೇಹ ಪತ್ತೆ

ಕೊಡಗಿನ ಮಾಲ್ದಾರೆ ಅರಣ್ಯ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ವರ್ಷ ಪ್ರಾಯದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದೆ.
ಹುಲಿಯ ಮೃತದೇಹ
ಹುಲಿಯ ಮೃತದೇಹ

ಮಡಿಕೇರಿ: ಕೊಡಗಿನ ಮಾಲ್ದಾರೆ ಅರಣ್ಯ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ವರ್ಷ ಪ್ರಾಯದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದೆ.

ಹುಲಿಯು ಅರಣ್ಯ ಪ್ರದೇಶದ ಜಲಮೂಲದ ಪಕ್ಕದಲ್ಲಿ ಸತ್ತು ಬಿದ್ದಿರುವುದು ಪತ್ತೆಯಾಗಿದ್ದು, ಇಲಾಖೆ ಅಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದಾರೆ.

ಈ ಹುಲಿ ಸೋಮವಾರ ಬೆಳಗಿನ ಜಾವ ಅರಣ್ಯ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವುದು ಕಂಡುಬಂದಿದೆ. ಆದರೆ ಅದಕ್ಕೆ ಸರಿಯಾಗಿ ನಡೆಯಲು ಸಾಧ್ಯವಾಗದೆ ಹುಲಿ ಗಾಯಗೊಂಡಿರುವುದನ್ನು ಅರಣ್ಯಾಧಿಕಾರಿಗಳು ಗಮನಿಸಿದ್ದಾರೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿಎನ್ ಮೂರ್ತಿ ಅವರು ತಿಳಿಸಿದ್ದಾರೆ.

ಗಾಯಗೊಂಡ ಹುಲಿಗೆ ಚಿಕಿತ್ಸೆ ನೀಡಲು ಇಲಾಖೆಯು ಅಗತ್ಯ ಪ್ರೋಟೋಕಾಲ್‌ಗಳನ್ನು ಅನುಸರಿಸಿ ಅದನ್ನು ಸೆರೆಹಿಡಿಯಲು ಸಿದ್ಧತೆ ನಡೆಸಿತು. ಅದೇ ರೀತಿ ದುಬಾರೆಯಿಂದ ಪಳಗಿದ ಆನೆಗಳನ್ನು ಸ್ಥಳಕ್ಕೆ ಕರೆಸಿ ರಕ್ಷಣಾ ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾಗುವ ಮೊದಲು ಹುಲಿ ಮೃತಪಟ್ಟಿದೆ. ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಿಂದ ಈ ಹುಲಿ ವಲಸೆ ಬಂದಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯದೊಳಗಿರುವ ಜಲಮೂಲದ ಪಕ್ಕದಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.

“ಹುಲಿಯು ಇನ್ನೊಂದು ಗಂಡು ಹುಲಿಯೊಂದಿಗೆ ಸಂಘರ್ಷದಲ್ಲಿ ತೊಡಗಿರುವ ಸಾಧ್ಯತೆಯಿದೆ. ಈ ಹುಲಿಗೆ ಅನೇಕ ಗಾಯಗಳಾಗಿವೆ. ಅದರೂ ಸಾವಿನ ಹಿಂದಿನ ಕಾರಣವನ್ನು ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಬಿಎನ್ ಮೂರ್ತಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com