ಮೈಸೂರು-ಹಾಸನ ಹೆದ್ದಾರಿಯಲ್ಲಿ ಅಪಘಾತ: ಇಬ್ಬರು ಯುವಕರ ದುರ್ಮರಣ

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ಕೆ.ಆರ್. ಪೇಟೆ ತಾಲೂಕಿನ ಹಿರೀಕಳಲೆ ಗ್ರಾಮದ ಬಳಿ ಮೈಸೂರು-ಹಾಸನ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮೈಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ಕೆ.ಆರ್. ಪೇಟೆ ತಾಲೂಕಿನ ಹಿರೀಕಳಲೆ ಗ್ರಾಮದ ಬಳಿ ಮೈಸೂರು-ಹಾಸನ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.

ಮೃತರನ್ನು ಹಿರೀಕಳಲೆ ಗ್ರಾಮದ ಸಂದೇಶ್(25) ಹಾಗೂ ಮರಡಹಳ್ಳಿ ನಿವಾಸಿ ಭರತ್(23) ಎಂದು ಗುರುತಿಸಲಾಗಿದೆ.

ಎಳನೀರು ವ್ಯಾಪಾರ ಮಾಡುತ್ತಿದ್ದ ಈ ಇಬ್ಬರು ಯುವಕರು ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಕೆ.ಆರ್.ಪೇಟೆಯಿಂದ ಕಿಕ್ಕೇರಿ ಕಡೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿರುವ ಶಂಕೆ ವ್ಯಕ್ತಪಡಿಸಿರುವ ಪೊಲೀಸರು, ಆ ವಾಹನದ ಪತ್ತೆಗಾಗಿ ಸಿಸಿಟಿವಿ ಕ್ಯಾಮರಾದ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com