ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ವಿಜೇಶ್ ಪಿಳ್ಳೈ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್

ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ವಿಜೇಶ್ ಪಿಳ್ಳೈ ಎಂಬುವವರ ವಿರುದ್ಧ ಯಾವುದೇ ಕಾರಣಗಳನ್ನು ಉಲ್ಲೇಖಿಸದೆ ದಾಖಲಿಸಿದ್ದ ಎಫ್ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. 
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ವಿಜೇಶ್ ಪಿಳ್ಳೈ ಎಂಬುವವರ ವಿರುದ್ಧ ಯಾವುದೇ ಕಾರಣಗಳನ್ನು ಉಲ್ಲೇಖಿಸದೆ ದಾಖಲಿಸಿದ್ದ ಎಫ್ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. 

ಕೇರಳದ ಚಿನ್ನದ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರು ವಿಜೇಶ್ ಪಿಳ್ಳೈ ಅವರ ವಿರುದ್ಧ ದೂರು ದಾಖಲಿಸಿದ್ದರು.

ಎಫ್ಐಆರ್ ರದ್ದು ಕೋರಿ ಪಿಳ್ಳೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸ್ಸನ ಅವರು, ಪೊಲೀಸರು ಮಾಡಿದ ಮನವಿಯ ಮೇರೆಗೆ ಮತ್ತೊಮ್ಮೆ ಸೂಕ್ತ ಆದೇಶ ಹೊರಡಿಸುವಂತೆ ಮ್ಯಾಜಿಸ್ಟ್ರೇಟ್‌ಗೆ ಸೂಚಿಸಿದ್ದಾರೆ. ಅಲ್ಲದೆ ತಾವು ತೀರ್ಪಿನಲ್ಲಿ ನೀಡಿದ ಮಾರ್ಗಸೂಚಿಗಳನ್ನು ನೆನಪಿನಲ್ಲಿಟ್ಟುಕೊಂಡು ಆದೇಶ ನೀಡುವಂತೆ ಮ್ಯಾಜಿಸ್ಟ್ರೇಟ್ ಸೂಚಿಸಿದ್ದಾರೆ.

ಪಿಳ್ಳೈ ತನಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸ್ವಪ್ನಾ ಅವರು ಮಾರ್ಚ್ 11, 2023 ರಂದು ಕೆಆರ್ ಪುರಂ ಪೊಲೀಸರಿಗೆ ದೂರು ನೀಡಿದ್ದರು. ನಂತರ, ಸ್ಟೇಷನ್ ಹೌಸ್ ಆಫೀಸರ್(ಎಸ್‌ಎಚ್‌ಒ), ಸಿಆರ್‌ಪಿಸಿಯ ಸೆಕ್ಷನ್ 155 ರ ಅಡಿಯಲ್ಲಿ ಕಡ್ಡಾಯವಾಗಿರುವ ಐಪಿಸಿಯ ಸೆಕ್ಷನ್ 506 ರ ಅಡಿ ಕೇಸ್ ದಾಖಲಿಸಲು ಮ್ಯಾಜಿಸ್ಟ್ರೇಟ್‌ ಅನುಮತಿ ಕೇಳಿದ್ದರು. ಎಸ್‌ಎಚ್‌ಒ ಕೋರಿಕೆಯ ಪರಿಶೀಲಿಸಿ ಮ್ಯಾಜಿಸ್ಟ್ರೇಟ್ ಕೋರ್ಟ ಅನುಮತಿ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com