ಅಕ್ರಮಗಳ ಆರೋಪ: ಕೆಎಸ್‌ಡಿಎಲ್‌‌ನಲ್ಲಿ ಲೋಕಾಯುಕ್ತ ಅಧಿಕಾರಿಗಳ ಶೋಧ

ಅಕ್ರಮಗಳ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಸೋಮವಾರ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) ದಲ್ಲಿ ಶೋಧ ನಡೆಸಿದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಅಕ್ರಮಗಳ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಸೋಮವಾರ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) ದಲ್ಲಿ ಶೋಧ ನಡೆಸಿದರು.

ದಾಖಲೆಗಳ ಪರಿಶೀಲನೆ ಪ್ರಗತಿಯಲ್ಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ಕೆಎಸ್‌ ಅಂಡ್‌ ಡಿಎಲ್‌ ನೌಕರರ ಸಂಘದ ಅಧ್ಯಕ್ಷ ಜಿಆರ್‌ ಶಿವಶಂಕರ್‌ ಫೆಬ್ರುವರಿಯಲ್ಲಿ ದೂರು ದಾಖಲಿಸಿದ್ದರು.

ಟೆಂಡರ್ ಪ್ರಕ್ರಿಯೆ, ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿಗಳು, ಗುತ್ತಿಗೆ ಕಾರ್ಮಿಕರನ್ನು ನೇಮಿಸಿಕೊಳ್ಳುವುದು ಮುಂತಾದ ಅನೇಕ ವಿಷಯಗಳ ಮೇಲೆ ಆರೋಪಗಳನ್ನು ಮಾಡಲಾಗಿದೆ. ಸಾಮಗ್ರಿ ಖರೀದಿಯಲ್ಲಿ 800 ಕೋಟಿ ರೂಪಾಯಿ ವಂಚನೆಯಾಗಿದೆ ಎಂದು ದೂರುದಾರರು ಆರೋಪಿಸಿದ್ದರು.

ಚನ್ನಗಿರಿ ಮಾಜಿ ಶಾಸಕ ಮತ್ತು ಕೆಎಸ್‌ಡಿಎಲ್ ಅಧ್ಯಕ್ಷರೂ ಆಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಕುಮಾರ್ ಎಂವಿ ಅವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ ನಂತರ, ಈ ದೂರು ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com