ಕರ್ನಾಟಕದ ಮಹದಾಯಿ ಯೋಜನೆ ವಿರುದ್ಧ ಗೋವಾ ಸರ್ಕಾರಕ್ಕೆ ಮಹಾರಾಷ್ಟ್ರ ಸಿಎಂ ಬೆಂಬಲ!

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಹದಾಯಿ ನೀರು ತಿರುವು ವಿರುದ್ಧ ಗೋವಾದ ಬಿಜೆಪಿ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಏಕನಾಥ್ ಶಿಂಧೆ
ಏಕನಾಥ್ ಶಿಂಧೆ

ಬೆಳಗಾವಿ: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಹದಾಯಿ ನೀರು ತಿರುವು ವಿರುದ್ಧ ಗೋವಾದ ಬಿಜೆಪಿ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮುಂಬೈನಲ್ಲಿ ನಡೆದ ಸಭೆಯೊಂದರಲ್ಲಿ ಶಿಂಧೆ ಅವರು, ಕರ್ನಾಟಕವು ತನ್ನ ಕಳಸಾ-ಬಂಡೂರಿ ನಾಲಾ ಯೋಜನೆಯನ್ನು ಅನುಷ್ಠಾನಗೊಳಿಸಲು ಮಹದಾಯಿ ನೀರನ್ನು ತಿರುಗಿಸುವುದನ್ನು ತಡೆಯಲು ನಾವು ಗೋವಾ ಸರ್ಕಾರವನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು. 

ಸಭೆಯಲ್ಲಿ ಗೋವಾ ಸಿಎಂ ಪ್ರಮೋದ್ ಸಾವಂತ್ ಕೂಡ ಭಾಗವಹಿಸಿದ್ದರು. ಮಹದಾಯಿ ವಿಚಾರದಲ್ಲಿ ಗೋವಾ ಮತ್ತು ಮಹಾರಾಷ್ಟ್ರ ಒಟ್ಟಾಗಿ ಕರ್ನಾಟಕದ ವಿರುದ್ಧ ಹೋರಾಟ ನಡೆಸಲಿವೆ ಎಂದು ಶಿಂಧೆ ಹೇಳಿದ್ದಾರೆ.

ಕಳಸಾ-ಬಂಡೂರಿ ನಾಲಾ ಯೋಜನೆಯ ಮೂಲಕ ರಾಜ್ಯದಲ್ಲಿ ಮಹದಾಯಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸಲು ಕರ್ನಾಟಕ ಸರ್ಕಾರ ಅಧಿಕೃತ ಅನುಮೋದನೆಯನ್ನು ಪಡೆದಿರುವ ಸಮಯದಲ್ಲಿ ಶಿಂಧೆ ಅವರ ಈ ಹೇಳಿಕೆ ಬಂದಿದೆ.

ಮಹದಾಯಿ ಯೋಜನೆಯ ಪರಿಷ್ಕೃತ ಸಮಗ್ರ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಜಲ ಆಯೋಗ ಅನುಮೋದನೆ ನೀಡಿರುವುದು ಮಾತ್ರವಲ್ಲದೆ, ಕೇಂದ್ರ ಸರ್ಕಾರವು ಗೆಜೆಟ್‌ ಅಧಿಸೂಚನೆಯನ್ನೂ ಹೊರಡಿಸಿದೆ.

ಇಷ್ಟೆಲ್ಲಾ ಆದರೂ ಗೋವಾ ಸರ್ಕಾರ ಮಹದಾಯಿ ನದಿಯಿಂದ ಕರ್ನಾಟಕಕ್ಕೆ ನೀರು ಹರಿಸುವುದನ್ನು ತಡೆಯಲು ಸರ್ವ ಪ್ರಯತ್ನ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com