ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: 2023ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಪೂರಕ ಪರೀಕ್ಷೆಯಲ್ಲೂ ಬಾಲಕಿಯರೇ‌ ಮೇಲುಗೈ ಸಾಧಿಸಿದ್ದಾರೆ‌.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 2023ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಪೂರಕ ಪರೀಕ್ಷೆಯಲ್ಲೂ ಬಾಲಕಿಯರೇ‌ ಮೇಲುಗೈ ಸಾಧಿಸಿದ್ದಾರೆ‌.

ಪರೀಕ್ಷೆಗೆ ಹಾಜರಾದ ಒಟ್ಟು 1,57,756 ವಿದ್ಯಾರ್ಥಿಗಳ ಪೈಕಿ 50,478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಧ್ಯಾಹ್ನ 3 ಗಂಟೆ ನಂತರ ಕಾಲೇಜುಗಳಲ್ಲಿ ಫಲಿತಾಂಶ ಲಗತ್ತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಾಲತಾಣ http://karresults.nic.in ನಲ್ಲಿ ಫಲಿತಾಂಶವನ್ನು ವಿದ್ಯಾರ್ಥಿಗಳು ಪಡೆಯಬಹುದಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪಡೆಯಲು ಜೂನ್ 26 ಕೊನೆ ದಿನವಾಗಿದೆ. ಮರು ಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಕೆಗೆ ಜೂನ್ 30 ಕೊನೆಯ ದಿನವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com