ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ಪಯಣ, ಕೇಂದ್ರ ಸಚಿವರ ಜೊತೆ ಸೌಹಾರ್ದಯುತ ಭೇಟಿ, ಕಾಂಗ್ರೆಸ್ ಸಭೆಯಲ್ಲಿ ಭಾಗಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಗೃಹ ಸಚಿವ ಅಮಿತ್ ಶಾ ಮತ್ತು ಇತರ ರಾಷ್ಟ್ರ ನಾಯಕರನ್ನು ಸೌಹಾರ್ದಯುತವಾಗಿ ಅವರು ಈ ಸಂದರ್ಭದಲ್ಲಿ ಭೇಟಿ ಮಾಡಲಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಗೃಹ ಸಚಿವ ಅಮಿತ್ ಶಾ ಮತ್ತು ಇತರ ರಾಷ್ಟ್ರ ನಾಯಕರನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಲಿದ್ದಾರೆ. 

ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಕಾರ್ಯಕ್ರಮವೂ ಇತ್ತು. ಆದರೆ ಪ್ರಧಾನಿಯವರು ನಾಳೆ ಜೂನ್ 21ರಿಂದ 24ರವರೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ.

ಭೇಟಿ ವೇಳೆ ಸಿದ್ದರಾಮಯ್ಯ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಕರ್ನಾಟಕದ ಕಾಮಗಾರಿ ಯೋಜನೆಗಳಿಗೆ ಸಹಕಾರ ಕೋರುವ ಸಾಧ್ಯತೆಯಿದೆ. ನಂತರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ.

ರಾಜ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯೆಲ್ ಅವರನ್ನು ಭೇಟಿ ಮಾಡುತ್ತಾರೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ, ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಖರೀದಿ ವಿಚಾರ ಈಗ ವ್ಯಾಪಕವಾಗಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಅವರು ಕೇಂದ್ರ ಸಚಿವರ ಜೊತೆ ಚರ್ಚೆ ನಡೆಸಲಿದ್ದಾರೆಯೇ ಎಂಬುದು ಇನ್ನೂ ದೃಢವಾಗಿಲ್ಲ. 

ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಸಭೆಯಲ್ಲಿ ಪಾಲ್ಗೊಳ್ಳುವುದು ಅವರ ನಾಳೆಯ ಭೇಟಿಯ ಮತ್ತೊಂದು ಪ್ರಮುಖ ಅಜೆಂಡಾವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ ಕರ್ನಾಟಕ ಸರ್ಕಾರದ ಸಚಿವರ ಸಭೆ ಕರೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com