ಮನೆ ಮುಂದೆ ನಿಲ್ಲಿಸುತ್ತಿದ್ದ ಬೈಕ್ ಗಳ ಕಳ್ಳತನ: 8 ಮಂದಿ ಖದೀಮರ ಬಂಧನ

ಮನೆಗಳ ಮುಂದೆ ನಿಲ್ಲಿಸಲಾಗುತ್ತಿದ್ದ ಬೈಕ್ ಗಳನ್ನು ಕಳ್ಳದನ ಮಾಡುತ್ತಿದ್ದ 8 ಮಂದಿ ಖದೀಮರನ್ನು ಕಾಟನ್ ಪೇಟೆ ಠಾಣೆ ಪೊಲೀಸರು ಮಂಗಳವಾರ ಬಂದನಕ್ಕೊಳಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಮನೆಗಳ ಮುಂದೆ ನಿಲ್ಲಿಸಲಾಗುತ್ತಿದ್ದ ಬೈಕ್ ಗಳನ್ನು ಕಳ್ಳದನ ಮಾಡುತ್ತಿದ್ದ 8 ಮಂದಿ ಖದೀಮರನ್ನು ಕಾಟನ್ ಪೇಟೆ ಠಾಣೆ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.

ಹಲವು ದಿನಗಳಿಂದ ನಗರ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನದಲ್ಲಿ ತೊಡಗಿದ್ದ ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಪಡೆದು ಬಂಧನಕ್ಕೊಳಪಡಿಸಲಾಗಿದ್ದು, ಆರೋಪಿಗಳಿಂದ ರೂ.20 ಲಕ್ಷ ಮೌಲ್ಯದ 22 ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರಾತ್ರಿ ವೇಳೆ ಮನೆ ಮುಂದೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ಬೈಕ್ ಗಳನ್ನು ನಕಲಿ ಕೀ ಬಳಸಿ ಆರೋಪಿಗಳು ಕಳವು ಮಾಡುತ್ತಿದ್ದರು. ಕಳವು ಮಾಡಿದ ಬೈಕ್ ಗಳನ್ನು ಕಳವು ಮಾಡುತ್ತಿದ್ದರು. ಕಳವು ಮಾಡಿದ ಬೈಕ್ ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದರು. ಈ ಸಂಬಂಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದವು.

ದೂರು ಹಿನ್ನೆಲೆಯಲ್ಲಿ ಆರೋಪಿಗಳ ಬಂಧನಕ್ಕೆ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಇದರಂತ ಎಂಟು ಖದೀಮರನ್ನು ಸೆರೆ ಹಿಡಿಯುವಲ್ಲಿ ಕಾಟನ್‌ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದರೊಂದಿಗೆ ಕಾಟನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ನಾಲ್ಕು ವಾಹನ ಕಳವು ಪ್ರಕರಣಗಳು ಹಾಗೂ ಚಂದ್ರಾ ಲೇಔಟ್, ಜ್ಞಾನಭಾರತಿ, ಅಮೃತಹಳ್ಳಿ, ಹಲಸೂರು, ಸಂಪಗಿರಾಮನಗರ, ಕೆಆರ್ ಮಾರುಕಟ್ಟೆ ಮತ್ತು ಹನುಮಂತನಗರ ಠಾಣೆಗಳಲ್ಲಿ ದಾಖಲಾಗಿದ್ದ 20ಕ್ಕೂ ಹೆಚ್ಚು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ.

ಎಂಟು ಆರೋಪಿಗಳು ಕಳ್ಳತನ ಮಾಡಿದ್ದ 20 ಲಕ್ಷಕ್ಕೂ ಅಧಿಕ ಮೌಲ್ಯದ 22 ದ್ವಿಚಕ್ರ ವಾಹನಗಳು ಹಾಗೂ ಒಂದು ಆಟೋ ರಿಕ್ಷಾವನ್ನು ಕಾಟನ್‌ಪೇಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com