ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು, ಸಿಎಂ ದೆಹಲಿ ಪ್ರವಾಸ ಸಮಯದಲ್ಲಿ ಬದಲಾವಣೆ

ತೀವ್ರ ಜ್ವರದಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಅವರನ್ನು ಕಳೆದ ರಾತ್ರಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಅವರನ್ನು ಕಳೆದ ರಾತ್ರಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಎಂ ದೆಹಲಿ ಪ್ರವಾಸ ಸಮಯದಲ್ಲಿ ಬದಲಾವಣೆ: ಇಂದು ಬೆಳಗ್ಗೆ ವಿಧಾನಸೌಧ ಮುಂದೆ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ ಸಿಎಂ ಸಿದ್ದರಾಮಯ್ಯ(CM Siddaramaiah) ದೆಹಲಿಗೆ ಹೋಗುವವರಿದ್ದಾರೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಸರ್ಕಾರದ ಸಚಿವರ ಸಭೆ ಕರೆದಿದ್ದಾರೆ. ಅದರಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ.

ಅದಕ್ಕೂ ಮುನ್ನ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು, ಗೃಹ ಸಚಿವ ಅಮಿತ್ ಶಾ, ಕೇಂದ್ರ ಆಹಾರ ಖಾತೆ ಸಚಿವರು ಸೇರಿದಂತೆ ಹಲವು ಕೇಂದ್ರ ನಾಯಕರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. 

ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿತ್ತು. ಆದರೆ, ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ. ನಂತರ ಬೆಳಗ್ಗೆ 11.30 ಗೆ ಹೆಚ್​ಎಎಲ್ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ದೆಹಲಿಗೆ ತೆರಳಲಿದ್ದಾರೆ.

ಬಹಿರಂಗವಾಗಿ ಎಲ್ಲಿಯೂ ಕಾಣಿಸಿಕೊಳ್ಳದ ಸಿಎಂ ಪತ್ನಿ: ಪಾರ್ವತಿ ಸಿದ್ದರಾಮಯ್ಯ ಅವರು ಜ್ವರದಿಂದ ಇಂದು ಚೇತರಿಸಿಕೊಂಡಿದ್ದು, ವಿಶ್ರಾಂತಿಯಲ್ಲಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಒಮ್ಮೆಯೂ ಸಾರ್ವಜನಿಕವಾಗಿ ಕಾಣಿಸಿಕೊಂಡವರಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಎರಡು ಬಾರಿ ಪ್ರಮಾಣ ವಚನ ಸ್ವೀಕರಿಸುವಾಗಲೂ ಪತಿಯ ಸಂಭ್ರಮದ ಕ್ಷಣವನ್ನು ಕಣ್ತುಂಬಿಕೊಳ್ಳಲು ಅವರು ಬಂದವರಲ್ಲ. 

ನಮ್ಮ ಮನೆಯವರಿಗೆ ಮಾಧ್ಯಮಗಳ ಮುಂದೆ ಬರಲು ಇಷ್ಟಪಡಲ್ಲ, ಸಂಪ್ರದಾಯಸ್ಥ ಮಹಿಳೆ, ನಾನು ಕರೆದರೂ ಬರುವುದಿಲ್ಲ. ಅವರಿಗೆ ಹೇಗೆ ಇಷ್ಟವೋ ಹಾಗೆಯೇ ಇರಲಿ ಎಂದು ನಾನು ಬಲವಂತ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಈ ಹಿಂದೆ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com