ಗೆಳೆಯರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಕಲಬುರಗಿಯ ಕಾಲೇಜು ವಿದ್ಯಾರ್ಥಿ ಭೀಮಾ ನದಿಯಲ್ಲಿ ಶವವಾಗಿ ಪತ್ತೆ!

ಕಲಬುರಗಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಆತನನ್ನು ಆತನ ಸ್ನೇಹಿತರೇ ಸೇತುವೆಯಿಂದ ತಳ್ಳಿದ್ದಾರೆ ಎಂದು ವಿದ್ಯಾರ್ಥಿಯ ಪೋಷಕರು ಶಂಕಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಆತನನ್ನು ಆತನ ಸ್ನೇಹಿತರೇ ಸೇತುವೆಯಿಂದ ತಳ್ಳಿದ್ದಾರೆ ಎಂದು ವಿದ್ಯಾರ್ಥಿಯ ಪೋಷಕರು ಶಂಕಿಸಿದ್ದಾರೆ. ನಂತರ ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತನನ್ನು ಕಲಬುರಗಿಯ ಕಮಲಾನಗರದ ನಿವಾಸಿ 17 ವರ್ಷದ ಶಿವಕುಮಾರ್ ಎಂದು ಗುರುತಿಸಲಾಗಿದೆ. ಪ್ರಥಮ ವರ್ಷದ ಪಿಯುಸಿ ಓದುತ್ತಿದ್ದ ಈತ ತನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ತೆರಳಿದ್ದ. ಜೇವರ್ಗಿ ತಾಲೂಕಿನ ನಾಗರಾಣಿ ಬಳಿ ಘಟನೆ ನಡೆದಿದೆ.

ಮೃತನು ಭಾನುವಾರ (ಜೂನ್ 18) ತನ್ನ ಸ್ನೇಹಿತರೊಂದಿಗೆ ಹೊರಗೆ ಹೋಗಿದ್ದು, ಸ್ನೇಹಿತರೆಲ್ಲರೂ ಮನೆಗೆ ಬಂದರೂ ಮನೆಗೆ ಹಿಂತಿರುಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. 

ನಂತರ ಪೋಷಕರು ಹಾಗೂ ಸಂಬಂಧಿಕರು ಆತನಿಗಾಗಿ ಹುಡುಕಾಟ ನಡೆಸಿದ್ದು, ಮಂಗಳವಾರ ನಾಗರಾಣಿ ಬಳಿಯ ಭೀಮಾ ನದಿಯಲ್ಲಿ ಶಿವಕುಮಾರ್ ಶವ ಪತ್ತೆಯಾಗಿದೆ.

ಆತನ ಸಾವಿನ ಹಿಂದೆ  ಹೊರಗೆ ಹೋಗಿದ್ದ ಗೆಳೆಯರ ಪಾತ್ರವಿದೆ ಎಂದು ಪೋಷಕರು ದೂರಿದ್ದು, ಅವರ ವಿರುದ್ಧ ನೆಲೋಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದು, ಸ್ನೇಹಿತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com