ಪೆರಿಫೆರಲ್‌ ವರ್ತುಲ ರಸ್ತೆ ಯೋಜನೆ: 6 ಸಾವಿರ ಕೋಟಿ ರೂ. ನೀಡುವಂತೆ ಕೇಂದ್ರಕ್ಕೆ ಸಚಿವ ಕೃಷ್ಣ ಬೈರೇಗೌಡ ಮನವಿ

ಕೇಂದ್ರ ಸರ್ಕಾರದ ವಿಶೇಷ ಅನುದಾನದಡಿ ಬೆಂಗಳೂರಿನ ಪೆರಿಫೆರಲ್‌ ವರ್ತುಲ ರಸ್ತೆ ಯೋಜನೆಗೆ 6 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಜಿಎಸ್‌ಟಿ ಕೌನ್ಸಿಲ್‌ನ ಕರ್ನಾಟಕದ ಪ್ರತಿನಿಧಿಯೂ ಆಗಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಂಗಳವಾರ ಮನವಿ ಮಾಡಿದರು.
ಸಚಿವ ಕೃಷ್ಣ ಭೈರೇಗೌಡ
ಸಚಿವ ಕೃಷ್ಣ ಭೈರೇಗೌಡ

ನವದೆಹಲಿ: ಕೇಂದ್ರ ಸರ್ಕಾರದ ವಿಶೇಷ ಅನುದಾನದಡಿ ಬೆಂಗಳೂರಿನ ಪೆರಿಫೆರಲ್‌ ವರ್ತುಲ ರಸ್ತೆ ಯೋಜನೆಗೆ 6 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಜಿಎಸ್‌ಟಿ ಕೌನ್ಸಿಲ್‌ನ ಕರ್ನಾಟಕದ ಪ್ರತಿನಿಧಿಯೂ ಆಗಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಂಗಳವಾರ ಮನವಿ ಮಾಡಿದರು.

ಕೇಂಜ್ರ ಸಚಿವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ‘15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಜಿಎಸ್‌ಟಿ ಬಾಕಿ ಮೊತ್ತ ಸಹ ಬರಬೇಕಿದೆ. ವಿಶೇಷ ಅನುದಾನದ ಬಿಡುಗಡೆಯಲ್ಲಿ ಕೂಡಾ ವಿಳಂಬವಾಗಿದೆ. ಈ ಬಗ್ಗೆ ಕೇಂದ್ರ ಸಚಿವರ ಗಮನ ಸೆಳೆಯಲಾಗಿದೆ. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದೆ. ವರ್ತುಲ ರಸ್ತೆ ನಿರ್ಮಾಣದಿಂದ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ರೂ21 ಸಾವಿರ ಕೋಟಿ ಮೊತ್ತದ ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ರೂ.6 ಸಾವಿರ ಕೋಟಿ ಅನುದಾನ ಕೇಳಲಾಗಿತ್ತು. ಭೂಸ್ವಾಧೀನಕ್ಕೆ ಸಹ ದೊಡ್ಡ ಮೊತ್ತ ಬೇಕಿದೆ. ಈ ವಿಷಯದ ಕುರಿತು ಕೇಂದ್ರ ಸರ್ಕಾರದ ನಿಲುವು ಬೇರೆ ರೀತಿ ಇದೆ ಎಂದು ತಿಳಿಸಿದರು.

ಅವರಿಗೆ ಯೋಜನೆಯ ಅಗತ್ಯದ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಅನುದಾನ ಬಿಡುಗಡೆಯಾಗುವ ವಿಶ್ವಾಸ ಇದೆ’ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com