ಬಿಬಿಎಂಪಿ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ: ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ದೂರು ದಾಖಲು

ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ದೂರು ದಾಖಲಾಗಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ನಂದೀಶ್ ರೆಡ್ಡಿ
ನಂದೀಶ್ ರೆಡ್ಡಿ

ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ದೂರು ದಾಖಲಾಗಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಸೋಮವಾರ ನಡೆದ ಮಳೆ ನೀರು ಚರಂಡಿ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಬಿಜೆಪಿ ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ಪಾಲಿಕೆ ಅಧಿಕಾರಿಗಳು ದೂರು ದಾಖಲಿಸಿದ್ದಾರೆ  ಎಂದು ತುಷಾರ್ ಗಿರಿನಾಥ್ ಖಚಿತ ಪಡಿಸಿದ್ದಾರೆ.

ಸರ್ಕಾರಿ ಅಧಿಕಾರಿಗಳು ಮತ್ತು ಪುರಸಭೆಯ ನೌಕರರು ತಮ್ಮ ಕರ್ತವ್ಯವನ್ನು ನಿರ್ವಹಿಸದಂತೆ ತಡೆಯಲು ಪ್ರಯತ್ನಿಸುವ ಸಾರ್ವಜನಿಕರು ಮತ್ತು ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ನಿಯಮಗಳು ಸಮಾನವಾಗಿ ಅನ್ವಯಿಸುತ್ತವೆ ಎಂದು ಗಿರಿನಾಥ್ ಸ್ಪಷ್ಟಪಡಿಸಿದರು.

ದೊಡ್ಡನೆಕ್ಕುಂದಿ ವಾರ್ಡ್‌ ನಂಬರ್ 85ರ ವ್ಯಾಪ್ತಿಯ ಫೆರ್ನಾ ಸಿಟಿಯ ರಾಜಕಾಲುವೆ ಒತ್ತುವರಿ ತೆರವು ಮಾಡಲು ಸೋಮವಾರ ಕಾರ್ಯಾಚರಣೆ ನಡೆದಿತ್ತು. ನಂದೀಶ್ ರೆಡ್ಡಿ  ಕೆಲಸಕ್ಕೆ ಅಡ್ಡಿಪಡಿಸಿದ್ದರು.  ರಾಜಕಾಲುವೆ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಕೆಲವರು, ಕಟ್ಟಡ ನಿರ್ಮಾಣ ಮಾಡಿದ್ದಾರೆ. ಅಂಥ ಕಟ್ಟಡ ತೆರವು ಮಾಡಲು ಬಿಬಿಎಂಪಿ ಅಧಿಕಾರಿಗಳ ತಂಡ ಸೋಮವಾರ ಸ್ಥಳಕ್ಕೆ ಹೋಗಿತ್ತು. ಸ್ಥಳಕ್ಕೆ ಬಂದ ನಂದೀಶ್ ರೆಡ್ಡಿ ಬುಲ್ಡೋಜರ್ ವಾಹನದ ಕೀ ಕಿತ್ತುಕೊಂಡು ಕಾರ್ಯಕ್ಕೆ ಅಡ್ಡಿ ಪಡಿಸಿದರು ಎಂದು ಬಿಬಿಎಂಪಿ ಅಧಿಕಾರಿಗಳು ಆರೋಪಿಸಿದ್ದಾರೆ.  ಒಂದು ಗಂಟೆ ಕಾರ್ಯಾಚರಣೆ ನಡೆಯದಂತೆ ತಡೆದಿದ್ದರು.

ಇನ್ನೂ ದೂರಿನ ಸಂಬಂಧ ಪ್ರತಿಕ್ರಿಯಿಸಿರುವ ನಂದೀಶ್ ರೆಡ್ಡಿ ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.  ತೆರವು  ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದನ್ನುನಿರಾಕರಿಸಿದರು . ಅವಶೇಷಗಳು ಸಂಗ್ರಹವಾಗುವುದರಿಂದ ಅಡಚಣೆಯಾಗುವುದನ್ನು ತಪ್ಪಿಸಲು ನಾನು ಕೆಳಗಿರುವ ಡ್ರೈವ್ ಪ್ರಾರಂಭಿಸಲು ಅಧಿಕಾರಿಗಳಿಗೆ ಹೇಳಲು ಪ್ರಯತ್ನಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕಮಿಷನ್ ಕೊಡುವಂತೆ ಕೆಲವು ಮಾಲೀಕರು ಮತ್ತು ಬಿಲ್ಡರ್‌ಗಳನ್ನು ಹೆದರಿಸುವ ಉದ್ದೇಶದಿಂದ ಬಿಬಿಎಂಪಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ನಂದೀಶ್ ರೆಡ್ಡಿ ಆರೋಪಿಸಿದರು.

ತೆರವು ಕಾರ್ಯಾಚರಣೆಗೆ ಮಳೆ ಅಡ್ಡಿ
ಮಹದೇವಪುರ ವಲಯದ ಫೆರ್ನ್ ಸಿಟಿ ಲೇಔಟ್‌ನಲ್ಲಿ ಸೋಮವಾರ ಕೆಲ ಒತ್ತುವರಿ ನೆಲಸಮ ಮಾಡಲು ಬುಲ್ಡೋಜರ್‌ಗಳೊಂದಿಗೆ ತೆರಳಿದ ಬಿಬಿಎಂಪಿ  ಅಧಿಕಾರಿಗಳು ಮಳೆಯಿಂದಾಗಿ ಮಂಗಳವಾರ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ನಿಲ್ಲಿಸಬೇಕಾಯಿತು.

ನಾವು ಹಳೆಯ ಗ್ರಾಮ ನಕ್ಷೆಯ ಗುರುತುಗಳ ಆಧಾರದ ಮೇಲೆ ಭೂ ಸಮೀಕ್ಷೆಯನ್ನು ನಡೆಸಿದ್ದೇವೆ ಮತ್ತು ಅತಿಕ್ರಮಣಗಳನ್ನು ತೆರವುಗೊಳಿಸಿದ್ದೇವೆ ಎಂದರು. ಕೆಲವು ತಾಂತ್ರಿಕ ಸಮಸ್ಯೆಗಳಿವೆ, ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ಸಮಸ್ಯೆಗಳನ್ನು ಬಗೆಹರಿಸಬೇಕು, ಅದಾದ ನಂತರ ಬುಧವಾರದಿಂದ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com