ಮರಳು ಮಾಫಿಯಾಗೆ ಬಲಿಯಾದ ಪೇದೆ ಮನೆಗೆ ಪ್ರಿಯಾಂಕ್ ಖರ್ಗೆ ಭೇಟಿ: 1 ಲಕ್ಷ‌ ರೂ. ಪರಿಹಾರದ ಚೆಕ್ ವಿತರಣೆ

ಇತ್ತೀಚೆಗೆ ಅಕ್ರಮ‌ ಮರಳು ತಪಾಸಣೆ ಸಂದರ್ಭದಲ್ಲಿ ಟ್ರಾಕ್ಟರ್ ಗೆ ಸಿಲುಕಿ ಸಾವನಪ್ಪಿದ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಮಯೂರ್ ಚೌಹಾಣ್ ಅವರ ನಿವಾಸಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಶಾಸಕ ಎಂ ವೈ ಪಾಟೀಲ್ ಅವರು ಮಂಗಳವಾರ ಚೌಡಾಪುರ ತಾಂಡಾದಲ್ಲಿ ಮೃತ ಹೆಡ್ ಕಾನ್‌ಸ್ಟೆಬಲ್ ಮಯೂರ್ ಚೌಹಾಣ್ ಅವರ ಪತ್ನಿ ನಿರ್ಮಲಾ ಅವರಿಗೆ 1 ಲಕ್ಷ ರೂ ಚೆಕ್ ಹಸ್ತಾಂತರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಶಾಸಕ ಎಂ ವೈ ಪಾಟೀಲ್ ಅವರು ಮಂಗಳವಾರ ಚೌಡಾಪುರ ತಾಂಡಾದಲ್ಲಿ ಮೃತ ಹೆಡ್ ಕಾನ್‌ಸ್ಟೆಬಲ್ ಮಯೂರ್ ಚೌಹಾಣ್ ಅವರ ಪತ್ನಿ ನಿರ್ಮಲಾ ಅವರಿಗೆ 1 ಲಕ್ಷ ರೂ ಚೆಕ್ ಹಸ್ತಾಂತರಿಸಿದರು.
Updated on

ಕಲಬುರಗಿ: ಇತ್ತೀಚೆಗೆ ಅಕ್ರಮ‌ ಮರಳು ತಪಾಸಣೆ ಸಂದರ್ಭದಲ್ಲಿ ಟ್ರಾಕ್ಟರ್ ಗೆ ಸಿಲುಕಿ ಸಾವನಪ್ಪಿದ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಮಯೂರ್ ಚೌಹಾಣ್ ಅವರ ನಿವಾಸಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಎಂ.ವೈ.ಪಾಟೀಲ ಜೊತೆ ಸೇರಿ ತಮ್ಮ ಪಕ್ಷದ ವತಿಯಿಂದ 1 ಲಕ್ಷ‌ ರೂ. ಚೆಕ್ ಅನ್ನು ಮೃತ ಮಯೂರ್ ಚೌಹಾಣ್ ಅವರ ಪತ್ನಿ ನಿರ್ಮಲಾ ಅವರಿಗೆ ವಿತರಿಸಿದರು.

ಇದೇ ವೇಳೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯ ಕಲ್ಪಿಸಲಾಗುವುದು. ಧೈರ್ಯದಿಂದಿರಿ, ಆತ್ಮ ವಿಶ್ವಾಸ ಕಳೆದುಕೊಳ್ಳಬೇಡಿ. ಸರ್ಕಾರ ನಿಮ್ಮೊಂದಿಗಿದೆ ಎಂದು ಕುಟುಂಬಸ್ಥರಿಗೆ ಸಚಿವರು ಮತ್ತು ಶಾಸಕರು ಸಾಂತ್ವನ ನುಡಿಗಳನ್ನಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅವರು, ಮೃತ ಮಯೂರ್ ಚೌಹಾಣ್ ಕುಟುಂಬಕ್ಕೆ ಪೊಲೀಸ್ ಇಲಾಖೆಯಿಂದ 30 ಲಕ್ಷ ರೂ. ಪರಿಹಾರ ನೀಡಲಾಗುವುದು. ಜೊತೆಗೆ ಸೇವಾ ವಿಮೆ, ಗ್ರಾಜುಟಿ ಸೇರಿದಂತೆ ಇತರೆ 10 ಲಕ್ಷ ರೂ. ಕುಟುಂಬಕ್ಕೆ ಸಿಗಲಿದೆ. ಸರ್ಕಾರದ ನಿಯಮಾವಳಿಯಂತೆ ಕುಟುಂಬದ‌ ಓರ್ವ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲಾಗುವುದು. ಮಕ್ಕಳ ವಿಧ್ಯಾಬ್ಯಾಸದ ಬಗ್ಗೆಯೂ ಸರ್ಕಾರ ಗಮನಹರಿಸಲಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಅಕ್ರಮ ಮರಳು ಮಾಫಿಯಾಗೆ ಕಡಿವಾಣ ಹಾಕಲಾಗುವುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 1 ತಿಂಗಳಾಗಿದೆ. ಜಿಲ್ಲೆಯಲ್ಲಿನ ಅಕ್ರಮ ಮರಳುಗಾರಿಕೆ, ಗಣಿಗಾರಿಕೆ, ಜೂಜು ಅಡ್ಡೆ ತಡೆಯಲು ಈಗಾಗಲೆ ಹೆಜ್ಜೆ ಇಟ್ಟಿದ್ದೇವೆ. ಈ ಪ್ರಕರಣ ಸ್ಟಾಕ್ ಯಾರ್ಡ್ ನಿಂದ ಮರಳು ತರುವಾಗ ಘಟಿಸಿದೆ. ಇದರಲ್ಲಿ ಯಾರೇ ತಪ್ಪಿತಸ್ಥರಿದ್ದರು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com