ಬೆಂಗಳೂರು: ವಿದ್ಯುತ್, ದಿನಬಳಕೆ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೆ ಹೋಟೆಲ್ ಗಳಲ್ಲಿ ಊಟ ತಿಂಡಿಗಳ ದರ ಏರಿಕೆ!

ರಾಜ್ಯದಲ್ಲಿ ಹಾಲು, ಗ್ಯಾಸ್‌, ವಿದ್ಯುತ್‌ ದರ ಸೇರಿ ಎಲ್ಲ ದಿನಬಳಕೆ ವಸ್ತುಗಳ ಬೆಲೆಯಲ್ಲಿ ಹೆಚ್ಚಳವಾದ ಬೆನ್ನಲ್ಲೇ ರಾಜ್ಯಾದ್ಯಂತ ಹೋಟೆಲ್‌ಗಳಲ್ಲಿ ಕಾಫಿ, ಟೀ, ತಿಂಡಿ, ಊಟದ ದರ ಹೆಚ್ಚಿಸಲು ಬೆಂಗಳೂರು ಹೋಟೆಲ್ ಗಳ ಮಾಲೀಕರ ಸಂಘ ನಿರ್ಧರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಹಾಲು, ಗ್ಯಾಸ್‌, ವಿದ್ಯುತ್‌ ದರ ಸೇರಿ ಎಲ್ಲ ದಿನಬಳಕೆ ವಸ್ತುಗಳ ಬೆಲೆಯಲ್ಲಿ ಹೆಚ್ಚಳವಾದ ಬೆನ್ನಲ್ಲೇ ರಾಜ್ಯಾದ್ಯಂತ ಹೋಟೆಲ್‌ಗಳಲ್ಲಿ ಕಾಫಿ, ಟೀ, ತಿಂಡಿ, ಊಟದ ದರ ಹೆಚ್ಚಿಸಲು ಬೆಂಗಳೂರು ಹೋಟೆಲ್ ಗಳ ಮಾಲೀಕರ ಸಂಘ ನಿರ್ಧರಿಸಿದೆ.

ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಅವರು, ಒಂದು ಕಡೆ ವಿದ್ಯುತ್ ದರ ಹೆಚ್ಚಳವಾಗಿದೆ. ಮತ್ತೊಂದೆಡೆ ಹಾಲಿನ ದರ ಹೆಚ್ಚಳದ ಬಗ್ಗೆ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಅಧ್ಯಕ್ಷ ಭೀಮಾನಾಯ್ಕ ಅವರು ನಿರ್ಧಾರ ಮಾಡಿದ್ದಾರೆ. ಜೊತೆಗೆ, ಹೋಟೆಲ್ ನಲ್ಲಿ ಉಪಯೋಗಿಸುವ ಗ್ಯಾಸ್, ತರಕಾರಿ, ಬೇಳೆ ಸೇರಿದಂತೆ ಎಲ್ಲ ಪದಾರ್ಥಗಳ ಬೆಲೆ ಏರಿಕೆಯಾಗಿದೆ.

ದರ ಏರಿಕೆಯ ಹೊಡೆತ ನಮ್ಮ ಉದ್ಯಮದ ಮೇಲೂ ಪರಿಣಾಮ ಬೀರುತ್ತಿದೆ. ಆದ್ದರಿಂದ ನಾವು ಕೂಡ ಹೋಟೆಲ್‌ನಲ್ಲಿಯೂ ಕಾಫಿ, ತಿಂಡಿ, ಊಟದ ದರ ಏರಿಕೆ ಮಾಡಲೇ ಬೇಕಾದ ಅನಿವಾರ್ಯತೆ ಇದೆ. ಈ ಬಗ್ಗೆ ಹೋಟೆಲ್ ಮಾಲೀಕರ ಸಂಘ ದರ ಹೆಚ್ಚಳಕ್ಕೆ ಚರ್ಚೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ರಾಜ್ಯಾದ್ಯಂತ ಮನೆಯಲ್ಲಿ ಅಡುಗೆ ಮಾಡದೇ ಹಾಗೂ ಮನೆಯಲ್ಲಿ ಅಡುಗೆ ಮಾಡಿಕೊಳ್ಳಲು ಸಾಧ್ಯವಿಲ್ಲದೇ ಹೋಟೆಲ್‌ಗಳಲ್ಲಿ ಕಾಫಿ,ಟೀ, ತಿಂಡಿ ಮತ್ತು ಊಟಗಳನ್ನು ಮಾಡುತ್ತಿದ್ದ ಎಲ್ಲ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಲು ಹೋಟೆಲ್‌ಗಳಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com