ನಾಗರಿಕ ಯೋಜನೆಗಳಲ್ಲಿನ ಅವ್ಯವಹಾರದ ತನಿಖೆಗೆ ಎಸ್‌ಐಟಿ ರಚನೆ: ಡಿಕೆ ಶಿವಕುಮಾರ್

ಬಿಬಿಎಂಪಿ ಮತ್ತು ಬಿಡಿಎ ಯೋಜನೆಗಳಲ್ಲಿನ ಭ್ರಷ್ಟಾಚಾರಗಳ ಕುರಿತ ಸಮಗ್ರ ತನಿಖೆಗೆ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಲಾಗುವುದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ಬಿಬಿಎಂಪಿ ಮತ್ತು ಬಿಡಿಎ ಯೋಜನೆಗಳಲ್ಲಿನ ಭ್ರಷ್ಟಾಚಾರಗಳ ಕುರಿತ ಸಮಗ್ರ ತನಿಖೆಗೆ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಲಾಗುವುದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ವಿವಿಧ ಕಾಮಗಾರಿಗಳು, ಟೆಂಡರ್‌ಗಳನ್ನು ಸ್ಥಗಿತಗೊಳಿಸಿರುವ ಬಗ್ಗೆ ಬಿಜೆಪಿ (BJP) ನಾಯಕರ ಟೀಕೆ ಕುರಿತು ವಿಕಾಸಸೌಧದಲ್ಲಿ ಮಾತನಾಡಿದ ಅವರು, ಜೆಪಿಯವರಿಗೆ ಜೋರಾಗಿ ಟೀಕೆ ಮಾಡಲು ಹೇಳಿ. ಎಲ್ಲವನ್ನೂ ಬಿಚ್ಚಿಡುತ್ತೇನೆಂದು ತಿರುಗೇಟು ನೀಡಿದರು.

ನಾಗರಿಕ ಯೋಜನೆಗಳಲ್ಲಿನ ಅವ್ಯವಹಾರಗಳ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತದೆ. ಯೋಜನೆಗಳೆಲ್ಲವೂ  ಸ್ಪಷ್ಟ ಮತ್ತು ಪಾರದರ್ಶಕವಾಗಿದ್ದರೆ" ಮಾತ್ರ ಪುನರಾರಂಭವಾಗಲಿದೆ ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಎಚ್ಚರಿಕೆ ನೀಡಿದ ಅವರು, ಆರ್‌ಆರ್‌ನಗರದಲ್ಲಿ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಕಾಮಗಾರಿಯಾಗದೇ ಬಿಲ್ ಗಳನ್ನು ತೆರವುಗೊಳಿಸಿರುವುದನ್ನು ಲೋಕಾಯುಕ್ತರು ಖಚಿತಪಡಿಸಿದ್ದಾರೆ. ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಬಿಡಿಎ ಯೋಜನೆಗಳ ಬಗ್ಗೆಯೂ ಎಸ್‌ಐಟಿ ತನಿಖೆಯ ಅಗತ್ಯವಿದೆ. ನಮ್ಮ ಸರ್ಕಾರ ಒತ್ತಡಕ್ಕೆ ಮಣಿಯುವುದಿಲ್ಲ’ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com