ಪ್ರತೀ ದಿನ ಠಾಣೆಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ: ಹಿರಿಯ ಅಧಿಕಾರಿಗಳಿಗೆ ಡಿಜಿ ಅಲೋಕ್ ಮೋಹನ್ ಸೂಚನೆ

ಪ್ರತೀ ದಿನ ಪೊಲೀಸ್ ಠಾಣೆಗಳಿಗೆ ಭೇಟಿ ಕೊಟ್ಟು ಸಿಬ್ಬಂದಿ ಮತ್ತು ಜನರ ಸಮಸ್ಯೆಗಳನ್ನು ಆಲಿಸುವಂತೆ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ)ಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಮೋಹನ್ ಅವರು ಖಡಕ್ ಸೂಚನೆ ನೀಡಿದ್ದಾರೆ.
ಅಲೋಕ್ ಮೋಹನ್
ಅಲೋಕ್ ಮೋಹನ್

ಬೆಂಗಳೂರು: ಪ್ರತೀ ದಿನ ಪೊಲೀಸ್ ಠಾಣೆಗಳಿಗೆ ಭೇಟಿ ಕೊಟ್ಟು ಸಿಬ್ಬಂದಿ ಮತ್ತು ಜನರ ಸಮಸ್ಯೆಗಳನ್ನು ಆಲಿಸುವಂತೆ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ)ಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಮೋಹನ್ ಅವರು ಖಡಕ್ ಸೂಚನೆ ನೀಡಿದ್ದಾರೆ.

ಪ್ರತಿ ಡಿಸಿಪಿ/ಎಸ್​ಪಿ ಅವರು ವಿವಿಐಪಿ ಭದ್ರತೆ ಹೊರತು ಪಡಿಸಿ ಉಳಿದ ದಿನಗಳಲ್ಲಿ ಅಂದರೆ ತಿಂಗಳಲ್ಲಿ ಒಮ್ಮೆಯಾದರೂ ತಮ್ಮ ವ್ಯಾಪ್ತಿಯ ಠಾಣೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಬೇಕು. ಅಲ್ಲಿನ ಕಾರ್ಯವೈಖರಿ, ಠಾಣೆಗೆ ಭೇಟಿ ನೀಡುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಒದಗಿಸಬೇಕು. ಅಲ್ಲದೆ, ಠಾಣಾಧಿಕಾರಿ, ಪಿಎಸ್‌ಐ, ಎಎಸ್‌ಐ, ಹೆಡ್‌ ಕಾನ್‌ಸ್ಟೆಬಲ್, ಕಾನ್‌ಸ್ಟೆಬಲ್‌ಗಳ ಕಷ್ಟ-ಸುಖಗಳು ಮತ್ತು ಸಲಹೆ-ಸೂಚನೆಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆದೇಶ ನೀಡಿದ್ದಾರೆ.

ಇದಲ್ಲದೆ, ವಾರದಲ್ಲಿ ಒಮ್ಮೆಯಾದರೂ ಡಿಸಿಪಿ/ಎಸ್​ಪಿಗಳು ರಾತ್ರಿ ಪಾಳಿ ಕರ್ತವ್ಯ ಮಾಡಬೇಕು. ಕರ್ತವ್ಯನಿರತ ಸಿಬ್ಬಂದಿ ಸರಿಯಾಗಿ ಬೀಟ್ ಮಾಡುತ್ತಿದ್ದಾರಾ, ಇ-ಬೀಟ್ ಮತ್ತು ಆ್ಯಪ್ ವ್ಯವಸ್ಥೆ, ದಾಖಲಾತಿಗಳನ್ನು ಪಾಲಿಸುತ್ತಿದ್ದಾರಾ ಎಂಬುದನ್ನು ಪರಿಶೀಲನೆ ನಡೆಸಬೇಕು. ಇಲ್ಲವಾದರೆ, ಅಂತಹವರಿಗೆ ಸರಿಯಾದ ಮಾರ್ಗದರ್ಶನ ಕೊಟ್ಟು ಕರ್ತವ್ಯ ನಿರ್ವಹಿಸುವಂತೆ ಮಾಡಬೇಕು. ಯಾವುದೇ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ಕೊಡುತ್ತೇನೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com