ಚಾಮರಾಜನಗರ: ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಬೇಡರಪುರ ಗ್ರಾಮದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಾಮರಾಜನಗರ: ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಬೇಡರಪುರ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ‌ ಬೇಡರಪುರ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟವರನ್ನು ಮಹದೇವಸ್ವಾಮಿ (48), ಸವಿತಾ (40), ಸಿಂಚನಾ (13) ಎಂದು ಗುರುತಿಸಿದ್ದಾರೆ. ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಶುಕ್ರವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಗೆ ಹೋದಾಗ ಮನೆಯಲ್ಲಿದ್ದ ಮೂವರೂ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ‌ ಕಾರಣ ತಿಳಿದುಬಂದಿಲ್ಲ.

ಆದರೆ, ಇವರ ಕುಟುಂಬಗಳ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತಿತ್ತು ಎಂದು ಹೇಳಲಾಗಿದೆ. ಆದರೆ, ಸಾವಿಗೆ ಅದೇ ಕಾರಣವಾಯಿತಾ? ಬೇರೆ ಏನಾದರೂ ಕಾರಣಗಳಿವೆಯೇ ಎಂದು ತಿಳಿದುಬಂದಿಲ್ಲ. ಸದ್ಯ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com