ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಉದ್ಯಮಿ ಎಲಾನ್ ಮಸ್ಕ್ ಅವರಿಗೆ ದಕ್ಷಿಣ ರಾಜ್ಯದಲ್ಲಿ ಉದ್ದಿಮೆ ಸ್ಥಾಪಿಸಲು ಆಹ್ವಾನ ನೀಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕೆಗಳು, ಮೂಲಸೌಕರ್ಯ ಸಚಿವ ಎಂ.ಬಿ.ಪಾಟೀಲ್, ಭಾರತದಲ್ಲಿ ಟೆಸ್ಲಾ ವಿಸ್ತರಣೆಗೆ ಕರ್ನಾಟಕವು ಪ್ರಶಸ್ತ ತಾಣವಾಗಿದೆ ಎಂದಿದ್ದಾರೆ.
"ಟೆಸ್ಲಾ ತನ್ನ ದೊಡ್ಡ ಸಾಮರ್ಥ್ಯ ಮತ್ತು ಸಾಮರ್ಥ್ಯಗಳೊಂದಿಗೆ ಭಾರತದಲ್ಲಿ ಉದ್ದಿಮೆ ಸ್ಥಾಪಿಸಲು ಪರಿಗಣಿಸಿದರೆ, ಕರ್ನಾಟಕ ಗಮ್ಯಸ್ಥಾನವಾಗಿದೆ. "ಪ್ರಗತಿಪರ ರಾಜ್ಯವಾಗಿ ಮತ್ತು ನಾವೀನ್ಯತೆ ಮತ್ತು ತಂತ್ರಜ್ಞಾನದ ಅಭಿವೃದ್ಧಿ ಹೊಂದುತ್ತಿರುವ ಕೇಂದ್ರವಾಗಿ, ಕರ್ನಾಟಕವು ಟೆಸ್ಲಾ ಮತ್ತು ಸ್ಟಾರ್‌ಲಿಂಕ್ ಸೇರಿದಂತೆ ಎಲಾನ್ ಮಸ್ಕ್‌ನ ಇತರ ಉದ್ಯಮಗಳಿಗೆ ಅಗತ್ಯವಾದ ಸೌಲಭ್ಯ ಒದಗಿಸಲು ಸಿದ್ಧವಾಗಿದೆ" ಎಂದು ಹೇಳಿರುವ ಎಂಬಿ ಪಾಟೀಲ್ ತಮ್ಮ ಟ್ವಿಟ್ ನ್ನು ಮಸ್ಕ್ ಅವರ ಟ್ವಿಟರ್ ಹ್ಯಾಂಡಲ್ ಗೆ ಟ್ಯಾಗ್ ಮಾಡಿದ್ದಾರೆ.
ಕರ್ನಾಟಕವು ಮುಂದಿನ ದಶಕಗಳವರೆಗೆ ರಾಜ್ಯವನ್ನು ಮುನ್ನಡೆಸಲು ತಂತ್ರಜ್ಞಾನ ಮತ್ತು 5.0 ಉತ್ಪಾದನೆಯ ಕೇಂದ್ರವಾಗಲು ಗಮನಹರಿಸಿದೆ ಎಂದು ಪಾಟೀಲ್ ಹೇಳಿದ್ದಾರೆ.
ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿ ಸಂದರ್ಭದಲ್ಲಿ ಟೆಸ್ಲಾ ಮತ್ತು ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್ ಅವರನ್ನು ಭೇಟಿಯಾಗಿದ್ದು, ಎಲೆಕ್ಟ್ರಿಕ್ ಮೊಬಿಲಿಟಿ ಮತ್ತು ವೇಗವಾಗಿ ವಿಸ್ತರಿಸುತ್ತಿರುವ ವಾಣಿಜ್ಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೂಡಿಕೆಗಾಗಿ ಭಾರತದಲ್ಲಿ ಅವಕಾಶಗಳನ್ನು ಅನ್ವೇಷಿಸಲು ಅವರನ್ನು ಆಹ್ವಾನಿಸಿದರು.
ಇದೇ ವೇಳೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮಸ್ಕ್, ಮುಂದಿನ ವರ್ಷ ಭಾರತ ದೇಶಕ್ಕೆ ಭೇಟಿ ನೀಡಲು ಯೋಜಿಸುತ್ತಿರುವುದಾಗಿ ಹೇಳಿದರು. ಸದ್ಯದಲ್ಲಿಯೇ ಭಾರತದಲ್ಲಿನ ಯೋಜನೆ ಬಗ್ಗೆ ಘೋಷಿಸುತ್ತೇವೆ ಎಂದು ತಿಳಿಸಿದರು.
Advertisement