ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ದೇವಾಲಯಗಳಲ್ಲಿ ಫುಲ್ ರಶ್, ಪ್ರವಾಸೋದ್ಯಮಕ್ಕೆ ಉತ್ತೇಜನ

ಕಾಂಗ್ರೆಸ್ ಸರ್ಕಾರ ಪ್ರಾರಂಭಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ 'ಶಕ್ತಿ'ಯೋಜನೆಯಿಂದ ದೇವಾಲಯಕ್ಕೆ ಆಗಮಿಸುವವರ ಸಂಖ್ಯೆಯಲ್ಲಿ ಹೆಚ್ಚಾಗಿದ್ದು, ಫುಲ್ ರಶ್ ಕಂಡುಬರುತ್ತಿದ್ದು, ಪ್ರವಾಸೋದ್ಯಮವನ್ನು ಉತ್ತೇಜಿಸಿದೆ. ಈ ವಾರಾಂತ್ಯದಲ್ಲಿ ಲಕ್ಷಗಟ್ಟಲೆ ಮಹಿಳೆಯರು ಹಿಂದೂ ಯಾತ್ರಾ ಸ್ಥಳಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಪ್ರಾರಂಭಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ 'ಶಕ್ತಿ'ಯೋಜನೆಯಿಂದ ದೇವಾಲಯಕ್ಕೆ ಆಗಮಿಸುವವರ ಸಂಖ್ಯೆಯಲ್ಲಿ ಹೆಚ್ಚಾಗಿದ್ದು, ಫುಲ್ ರಶ್ ಕಂಡುಬರುತ್ತಿದ್ದು, ಪ್ರವಾಸೋದ್ಯಮವನ್ನು ಉತ್ತೇಜಿಸಿದೆ. ಈ ವಾರಾಂತ್ಯದಲ್ಲಿ ಲಕ್ಷಗಟ್ಟಲೆ ಮಹಿಳೆಯರು ಹಿಂದೂ ಯಾತ್ರಾ ಸ್ಥಳಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿದ್ದಾರೆ. 

ಬೆಂಗಳೂರು ಮತ್ತು ಎಲ್ಲಾ ಜಿಲ್ಲಾ ಕೇಂದ್ರಗಳಿಂದ ಬಸ್‌ಗಳು ಪೂರ್ಣ ಪ್ರಮಾಣದಲ್ಲಿ ಸಂಚರಿಸುತ್ತಿದ್ದು, ಮಹಿಳೆಯರು ದೊಡ್ಡ ಗುಂಪುಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಈ ಯೋಜನೆಯ ಯಶಸ್ಸು ರಾಜ್ಯದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದ್ದು, ಹಿಂದೂ ಧರ್ಮದ ರಕ್ಷಕ ಎಂಬ ಪಕ್ಷದ ಪಾಲು ಸವಾಲಾಗಿ ಪರಿಣಮಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಯೋಜನೆಯಡಿಯಲ್ಲಿ ಅವರ ಕುಟುಂಬದ ಸದಸ್ಯರೂ ಉಚಿತ ಪ್ರಯಾಣವನ್ನು ಪಡೆಯುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ತಮ್ಮ ಸಂಬಂಧಿಕರನ್ನು ಮನವೊಲಿಸುವುದು ಕಷ್ಟಕರವಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.ಮಾನ್ಸೂನ್ ಸಮಯದಲ್ಲಿ, ಧಾರಾಕಾರ ಮಳೆಯ ನಡುವೆ ಹಿಂದೂ ಯಾತ್ರಾ ಕೇಂದ್ರಗಳಲ್ಲಿ ಸಾಮಾನ್ಯವಾಗಿ ಹೆಚ್ಚಾಗಿ ರಶ್ ಇರಲ್ಲ ಈ ಮಧ್ಯೆ ಸ್ತ್ರೀ ಶಕ್ತಿ ಗುಂಪುಗಳು ಮಹಿಳೆಯರಿಗಾಗಿ ತೀರ್ಥಯಾತ್ರೆಗಳನ್ನು ಆಯೋಜಿಸುತ್ತಿವೆ, ಅವುಗಳಲ್ಲಿ ಕೆಲವು ಶನಿವಾರ ಬೆಳಿಗ್ಗೆ ಪ್ರಾರಂಭವಾದವು.

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಮೈಸೂರು ಚಾಮುಂಡೇಶ್ವರಿ ಬೆಟ್ಟ, ಸವದತ್ತಿ ಯಲ್ಲಮ್ಮ ಮತ್ತು ಕೂಡಲ ಸಂಗಮದಂತಹ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಭಕ್ತರು ಅದರಲ್ಲೂ ಮಹಿಳೆಯರೇ ಹೆಚ್ಚಾಗಿ ಇರುತ್ತಾರೆ. ಅಲ್ಲದೇ ತಮ್ಮ ಕುಲದೇವತೆಗಳ ದರ್ಶನ ಮಾಡುತ್ತಿದ್ದಾರೆ. ಸಾರಿಗೆ ಇಲಾಖೆಯು ಶನಿವಾರ ಹೊರಡಿಸಿದ ಅಧಿಕೃತ ಹೇಳಿಕೆಯ ಪ್ರಕಾರ, ಜೂನ್ 11-23 ರ ನಡುವೆ 6.57 ಕೋಟಿಗೂ ಹೆಚ್ಚು ಮಹಿಳೆಯರು ಬಸ್‌ಗಳನ್ನು ಬಳಸಿಕೊಂಡು ವಿವಿಧ ಸ್ಥಳಗಳಿಗೆ ಪ್ರಯಾಣಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com