ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರಿ ಕಚೇರಿ ಸ್ಥಾಪನೆಯಿಂದ ತಂತ್ರಜ್ಞಾನ ಕ್ಷೇತ್ರಕ್ಕೆ ಉತ್ತೇಜನ: ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿಗೆ ಶೀಘ್ರದಲ್ಲೇ ಅಮೆರಿಕಾ ತನ್ನ ರಾಯಭಾರಿ ಕಚೇರಿಯನ್ನು ಆರಂಭಿಸಲಿದ್ದು, ಈ ಬೆಳವಣಿಗೆ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆಯವರು ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರಿಯಾಂಕ್ ಖರ್ಗೆ.
ಪ್ರಿಯಾಂಕ್ ಖರ್ಗೆ.
Updated on

ಬೆಂಗಳೂರು: ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿಗೆ ಶೀಘ್ರದಲ್ಲೇ ಅಮೆರಿಕಾ ತನ್ನ ರಾಯಭಾರಿ ಕಚೇರಿಯನ್ನು ಆರಂಭಿಸಲಿದ್ದು, ಈ ಬೆಳವಣಿಗೆ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆಯವರು ಸಂತಸ ವ್ಯಕ್ತಪಡಿಸಿದ್ದಾರೆ.

ಮೋದಿಯವರು ಅಮೆರಿಕಾಗೆ ಭೇಟಿ ನೀಡಿದ ಬೆನ್ನಲ್ಲೇ ಹೇಳಿಕೆ ನೀಡಿದ ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು, ಅಮೆರಿಕವು ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಎರಡು ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲಿದೆ. ಅದೇ ರೀತಿ ಭಾರತ ಸಿಯಾಟಲ್‌ನಲ್ಲಿ ಕಚೇರಿ ತೆರೆಯಲಿದ್ದು, ಜನರ ನಡುವಿನ ಬಾಂಧವ್ಯ ಹೆಚ್ಚಳಕ್ಕೆ ನೆರವಾಗಲಿದೆ. ಕಳೆದ ವರ್ಷ ಅಮೆರಿಕವು ಭಾರತೀಯ ವಿದ್ಯಾರ್ಥಿಗಳಿಗೆ ದಾಖಲೆಯ 1,25,000 ವೀಸಾಗಳನ್ನು ನೀಡಿದೆ. ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷವೊಂದರಲ್ಲೇ ಶೇಕಡಾ 20 ರಷ್ಟು ಹೆಚ್ಚಳವಾಗಿದೆ. ಇದರೊಂದಿಗೆ ಅಮೆರಿಕದಲ್ಲಿ ಅತಿದೊಡ್ಡ ವಿದೇಶಿ ವಿದ್ಯಾರ್ಥಿ ಸಮುದಾಯವಾಗಿ ಭಾರತೀಯ ವಿದ್ಯಾರ್ಥಿ ಸಮುದಾಯ ಹೊರಹೊಮ್ಮಿದೆ ಎಂದು ಹೇಳಿದ್ದಾರೆ.

ಈ ಬೆಳವಣಿಗೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ್ ಖರ್ಗೆಯವರು, ಇದೊಂದು ಉತ್ತಮ ಬೆಳವಣಿಗೆಯಾಗಿದ್ದು, ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಖ್ಯಾತಿಯನ್ನು ಹೆಚ್ಚಿಸಲಿದೆ ಎಂದು ಹೇಳಿದ್ದಾರೆ.

ಇಷ್ಟು ದಿನ ವೀಸಾ ಅರ್ಜಿಗಳಿಗಾಗಿ ಬೆಂಗಳೂರಿಗರು ಚೆನ್ನೈ ಮತ್ತು ಹೈದರಾಬಾದ್‌ಗೆ ಪ್ರಯಾಣಿಸಬೇಕಾಗಿತ್ತು. ಈ ಬೆಳವಣಿಗೆ ಕರ್ನಾಟಕದ ಐಟಿ ಮತ್ತು ಐಟಿಇಎಸ್ ಉದ್ಯಮಗಳು, ಟೆಕ್ಕಿಗಳು ಮತ್ತು ವಿದ್ಯಾರ್ಥಿಗಳಿಗೆ ಸಹಾಯ ಮಾಡಲಿದೆ ಎಂದು ತಿಳಿಸಿದ್ದಾರೆ

ಬೆಂಗಳೂರಿನಲ್ಲಿ ಅಮೆರಿಕಾ ತನ್ನ ರಾಯಭಾರ ಕಚೇರಿ ಆರಂಭಿಸುವಂತೆ ಮಾಡುವಂತೆ 2019ರ ಜುಲೈ.2 ರಂದು ಅಂದಿನ ರಾಜ್ಯ ಬಿಜೆಪಿ ವಕ್ತಾರ ಎ.ಎಚ್.ಆನಂದ್ ಅವರು ಅಂದಿನ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿವಿ ಸದಾನಂದ ಗೌಡ ಅವರಿಗೆ ಪತ್ರ ಬರೆದು ರಾಯಭಾರಿ ಕಚೇರಿ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ಮನವಿ ಮಾಡಿದ್ದರು.

ಈ ಪತ್ರವನ್ನು ಸದಾನಂದ ಗೌಡ ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ರವಾನಿಸಿದ್ದರು. ಇದಕ್ಕೆ ಜುಲೈ 31, 2019 ರಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸ್ಪಂದನೆ ನೀಡಿದ್ದರು.

ಬೆಂಗಳೂರಿನಲ್ಲಿ ಹೆಚ್ಚುವರಿ ರಾಯಭಾರಿ ಕಚೇರಿಯನ್ನು ತೆರೆಯಲು ಎಲ್ಲಾ ರೀತಿಯ ಪ್ರಯತ್ನವನ್ನು ಮಾಡುವುದಾಗಿ ಆಶ್ವಾಸನೆ ನೀಡಿದ್ದರು.

ಈ ವರ್ಷದ ಮಾರ್ಚ್‌ನಲ್ಲಿ ಅಂದಿನ ಬಿಜೆಪಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಮೆರಿಕದ ಪ್ರಭಾರ ರಾಯಭಾರಿ ಎ ಎಲಿಜಬೆತ್ ಜೋನ್ಸ್ ಅವರೊಂದಿಗೆ ಚರ್ಚೆ ನಡೆಸಿದ ಸಂದರ್ಭದಲ್ಲಿಯೂ ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರ ಕಚೇರಿ ಸ್ಥಾಪನೆ ಮಾಡುವಂತೆ ಪ್ರಸ್ತಾಪ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com