ಅನ್ನಭಾಗ್ಯ ಯೋಜನೆ: ಅಕ್ಕಿ ಖರೀದಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ

ಅನ್ನಭಾಗ್ಯ ಯೋಜನೆ ಜಾರಿಗೆ ಅಕ್ಕಿ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಕರ್ನಾಟಕ ಆಹಾರ ಮತ್ತು ರಾಜ್ಯ ಸಚಿವ ಕೆ ಎಚ್ ಮುನಿಯಪ್ಪ ನಡುವೆ ನಡೆದ ಮಾತುಕತೆ ಯಾವುದೇ ಫಲ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಅಕ್ಕಿ ಖರೀದಿ ಸಂಬಂಧ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನ್ನಭಾಗ್ಯ ಯೋಜನೆ ಜಾರಿಗೆ ಅಕ್ಕಿ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಕರ್ನಾಟಕ ಆಹಾರ ಮತ್ತು ರಾಜ್ಯ ಸಚಿವ ಕೆ ಎಚ್ ಮುನಿಯಪ್ಪ ನಡುವೆ ನಡೆದ ಮಾತುಕತೆ ಯಾವುದೇ ಫಲ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಅಕ್ಕಿ ಖರೀದಿ ಸಂಬಂಧ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮತ್ತು ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಈ ವೇಳೆ ಮುಖ್ಯಮಂತ್ರಿಗಳು ಕರ್ನಾಟಕಕ್ಕೆ ಅಕ್ಕಿ ನೀಡಲು ಮುಂದಾಗಿರುವ ರಾಜ್ಯಗಳ ಹಾಗೂ ಅವುಗಳ ದರಪಟ್ಟಿಗಳ ಕುರಿತು ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ, ಇತರೆ ರಾಜ್ಯಗಳು ಅಥವಾ ಕೇಂದ್ರ ಏಜೆನ್ಸಿಗಳಿಂದ ಅಕ್ಕಿಯ ಬೆಲೆ ಮತ್ತು ಸಾಗಣೆಗೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ಚರ್ಚೆ ನಡೆಯಿತು ಎನ್ನಲಾಗಿದೆ.

ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಡ್ಡಿಪಡಿಸಲು ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ. ಅವರ ಬಳಿ ಟನ್‌ಗಳಷ್ಟು ಅಕ್ಕಿ ಇದೆ. ಅದನ್ನು ಖಾಸಗಿ ಸಂಸ್ಥೆಗಳಿಗೆ ನೀಡುತ್ತಿದ್ದಾರೆ, ಆದರೆ, ರಾಜ್ಯಗಳಿಗೆ ನೀಡುತ್ತಿಲ್ಲ. ದುಡ್ಡು ಕೊಟ್ಟು ಖರೀದಿ ಮಾಡುತ್ತೇವೆಂದರೂ ನಮಗೆ ಅಕ್ಕಿ ನೀಡುತ್ತಿಲ್ಲ ಎಂದು ಕಿಡಿಕಾರಿದರು.

“ಐದು ಗ್ಯಾರಂಟಿ ಯೋಜನೆಗಳಲ್ಲಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡುವ ಶಕ್ತಿ ಯೋಜನೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಜುಲೈ 1ರಿಂದ ಗೃಹ ಜ್ಯೋಜನೆ ಯೋಜನೆ ಜಾರಿಯಾಗಲಿದೆ. ಅನ್ನಭಾಗ್ಯ ಯೋಜನೆ ಜಾರಿಗೆ ಅಗತ್ಯವಿರುವ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಲಭ್ಯವಾಗಿಲ್ಲ. ಹೀಗಾಗಿ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ, ಕೇಂದ್ರೀಯ ಭಂಡಾರ್, ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್‌ನಂತಹ ಸರ್ಕಾರಿ ಸಂಸ್ಥೆಗಳಿಂದ ಅಕ್ಕಿ ಖರೀದಿಸಲು ದರ ಪಟ್ಟಿಯನ್ನು ಪರಿಶೀಲಿಸುತ್ತಿದ್ದೇವೆಂದು ತಿಳಿಸಿದರು.

ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸಲು ಟೆಂಡರ್ ಕರೆಯಬೇಕಾಗಿರುವುದರಿಂದ ಅಕ್ಕಿಯ ಪ್ರಮಾಣ ಮತ್ತು ದರದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. "ಮೆಕ್ಕೆಜೋಳ ಮತ್ತು ರಾಗಿ ವಿತರಣೆಯು ಒಂದು ಆಯ್ಕೆಯಾಗಿದೆ ಮತ್ತು ಇಡೀ ವರ್ಷಕ್ಕೆ ಸರಬರಾಜು ಮಾಡಲು ಸಾಕಷ್ಟು ದಾಸ್ತಾನು ಇಲ್ಲದಿರುವುದರಿಂದ ಅದನ್ನು 6 ತಿಂಗಳವರೆಗೆ ನೀಡುವ ಕುರಿತು ಚಿಂತನೆಗಳು ನಡೆದಿವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com